ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿರೋಧಿಗಳ ಟೀಕೆಗೆ ಕಿವಿಗೊಡದಿರಿ

Lingaraj Badiger
Updated On : 25 Nov 2013, 11:18 am

ಮಸ್ಕ್ಣಿ ನ.24
ವಿರೋಧ ಪಕ್ಷಗಳ ಟೀಕೆಗಳಿಗೆ ಕಿವಿಗೊಡದೇ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಂಘಟನೆಗೆ ತೊಡಗುವಂತೆ ಮಾಜಿ ಶಾಸಕ ಅಮರೇಗೌಡ ಬೈಯ್ಯಾಪುರ ಕರೆ ನೀಡಿದರು.
ಅವರು ಪಟ್ಟಣದ ಭ್ರಮರಾಂಬಾ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅನೇಕ ಜನಪರ ಯೋಜನೆ ಜಾರಿಗೆ ತಂದಿದೆ. ವಿರೋಧ ಪಕ್ಷಗಳು ವಿನಾಕಾರಣ ಅಂಥ ಯೋಜನೆಗಳ ಸದುದ್ದೇಶವನ್ನು ಅರಿಯದೆ ಟೀಕಿಸುತ್ತಿವೆ ಎಂದು ಲೇವಡಿ ಮಾಡಿದರು.
ಸರ್ಕಾರದ ವಿವಿಧ ಕಾರ್ಯಕ್ರಮಗಳ ಬಗ್ಗೆ ಜನತೆಗೆ ಮಾಹಿತಿ ನೀಡಿ ಸರ್ಕಾರದ ಸಾಧನೆಯ ಬಗ್ಗೆ ಜನತೆಗೆ ತಿಳಿಸಿಕೊಡುವಂತೆ ಸಲಹೆ ನೀಡಿದ ಅವರು, ಲಿಂಗಸ್ಗೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ವಿರೋಧ ಪಕ್ಷಗಳ ಒಗ್ಗೂಡುವಿಕೆ ಮತ್ತು ಕಾಂಗ್ರೆಸ್‌ನ ಬಣ ರಾಜಕೀಯವೇ ಕಾರಣ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ. ಇದನ್ನು ಎಲ್ಲರೂ ಅರಿತುಕೊಳ್ಳಬೇಕಾಗಿದೆ. ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಕ್ಷೇತ್ರದಿಂದ ಬಹುಮತವನ್ನು ನೀಡಲಾಗಿತ್ತು. ಅಂತೆಯೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಗೆಲ್ಲಿಸುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು. ಶಾಸಕ ಪ್ರತಾಪಗೌಡ ಪಾಟೀಲ್, ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂದಾನೆಪ್ಪ ಗುಂಡಳ್ಳಿ ಮಾತನಾಡಿದರು. ಲಿಂಗಸ್ಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ಮುದ್ಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನ್ವರ್ ಖಾನ್, ತಾಪಂ ಸದಸ್ಯರಾದ ಹನುಮಂತಪ್ಪ ಮೋಚಿ, ನಿರ್ಮಲ, ನಾಗವೇಣಿ, ಲಲಿತಮ್ಮ, ಪಾರ್ವತಿ ಮುಂತಾದವರು ಉಪಸ್ಥಿತರಿದ್ದರು. ನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement