ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕನ್ನಡ ಬಿಟ್ಟು ಇಂಗ್ಲಿಷ್ ಕಲಿಕೆ ಸಲ್ಲ

Srinivasa Murthy VN
Updated On : 27 Nov 2013, 10:38 am

ಲಿಂಗಸ್ಗೂರು: ಜಾಗತೀಕರಣದ ಪ್ರಭಾವ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಲಗ್ಗೆಯಿಂದ ಸ್ವಾಭಿಮಾನಿ ಕನ್ನಡ ಬಿಟ್ಟು ಇಂಗ್ಲೀಷ್ ಕಲಿಸುವ ವ್ಯಾಮೋಹದತ್ತ ಪಾಲಕರು ವಾಲುತ್ತಿದ್ದಾರೆಂದು ಕರವೇ ರಾಜ್ಯಾಧ್ಯಕ್ಷ ಎಚ್. ಶಿವರಾಮೇಗೌಡ ವಿಷಾದ ವ್ಯಕ್ತಪಡಿಸಿದರು.
ಸ್ಥಳೀಯ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸೋಮವಾರ ಸಂಜೆ 58ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಾಭಿಮಾನಿ ಕನ್ನಡಿಗರ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ರಾಜ್ಯದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಸ್ಥಾಪನೆಯಿಂದ ಉದ್ಯೋಗಾವಕಾಶಗಳು ದೊರೆಯುವ ಭ್ರಮೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಲ್ಲಿ ಕಲಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರ ಪರಿಣಾಮ ಕನ್ನಡ ನಾಡಿನ ಸಂಸ್ಕೃತಿ, ಸಂಸ್ಕಾರ ನಶಿಸಿ ಹೊಗುತ್ತಿದೆ ಎಂದು ನೊಂದು ನುಡಿದರು.
ಸಹಾಯಕ ಆಯುಕ್ತ ಟಿ. ಯೋಗೇಶ ಮಾತನಾಡಿ, ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಆಯಾ ಮಣ್ಣಿನ ಸೊಗಡಿಗನುಸಾರ ವೈವಿದ್ಯಮಯವಾಗಿ ಕನ್ನಡ ಭಾಷೆ ಮಾತನಾಡುತ್ತಿರುವುದು ವಿಶೇಷವಾಗಿದೆ. ಕನ್ನಡ ನಾಡು, ನುಡಿ, ನೆಲ, ಜಲದ ವಿಷಯ ಬಂದಾಗ ಎಲ್ಲರೂ ಸಂಘಟಿತರಾಗಿ ಅಹಿಂಸಾತ್ಮಕ ಹಾಗೂ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮಾಡಬೇಕೆಂದು ಕರೆ ನೀಡಿದರು.
ಕಾರ್ಯಮದಲ್ಲಿ ಡಿವೈಎಸ್‌ಪಿ ಅನಿತಾ ಹದ್ದಣ್ಣವರ್, ಕರವೇ ರಾಜ್ಯ ಉಪಾಧ್ಯಕ್ಷ ಮಂಜುನಾಥಗೌಡ, ಅಶೋಕ ಮುರಾರಿ, ಜಿಲ್ಲಾಧ್ಯಕ್ಷ ಅಶೋಕ ಕುಮಾರ ಜೈನ್, ತಾಲೂಕಾಧ್ಯಕ್ಷ ಮೌಲಾಹುಸೇನ, ಬಳ್ಳಾಗಿ ಜಿಲ್ಲಾಧ್ಯಕ್ಷ ಶಿವಪ್ಪ ನಾಯಕ, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ರಾಜೇಶ್ ಮಾಣಿಕ್ ಭಜಂತ್ರಿ, ಕೆ.ವಿ. ಕಳ್ಳಿಮಠ ಹಟ್ಟಿ, ಸಿಂಧನೂರು ತಾಲೂಕಾಧ್ಯಕ್ಷ ಅಜೀಜ್ ಓಸ್ತವಾಲ, ಮುಖಂಡರಾದ ನಾಗರಾಜ ತಿಪ್ಪಣ್ಣ, ಅಮರಯ್ಯಸ್ವಾಮಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement