ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸಾಧಕರನ್ನು ಗೌರವಿಸಿ: ಪಾಪಾರೆಡ್ಡಿ

Srinivasa Murthy VN
Updated On : 28 Oct 2013, 11:29 am

ರಾಯಚೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಮತ್ತಷ್ಟು ಹೆಚ್ಚಿನ ಸಾಧನೆಗೆ ಸ್ಫೂರ್ತಿ ತುಂಬುವಂತೆ ಮಾಜಿ ಶಾಸಕ ಪಾಪಾರೆಡ್ಡಿ ಕರೆ ನೀಡಿದರು. ನಗರದ ರಂಗಮಂದಿರದಲ್ಲಿ ಭಾನುವಾರ ಮಾತೋಶ್ರೀ ಮಹಾಂತಮ್ಮ ಶಿವಬಸಪ್ಪ ಗೋನಾಳ ಪ್ರತಿಷ್ಠಾನದಿಂದ ಆಯೋಜಿಸಿದ್ದ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಸುಗಮ ಸಂಗೀತ ವಿದ್ಯಾಲಯದ ಮೂರನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಸಾಧಕರ ಹಿಂದೆ ಅವರ ಗುರುಗಳ ಪ್ರಭಾವ ಕಾಣಬಹುದಾಗಿದೆ. ಗುರುಗಳ ಕೊಡುಗೆಯನ್ನು ಎಂದಿಗೂ ಮರೆಯುವಂತಿಲ್ಲ ಎಂದ ಅವರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿರುವ ಪ್ರತಿಷ್ಠಾನದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್ ಮಾತನಾಡಿ, ಆದರ್ಶ ದಂಪತಿಗಳನ್ನು ಗುರುತಿಸಿ ಪುರಸ್ಕರಿಸುತ್ತಿರುವುದರಿಂದ ಸಾಮಾಜಿಕ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲು ನೆರವಾಗಲಿದೆ ಎಂದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಪ್ರತಿಷ್ಠಾನದಿಂದ ಮಹಾಂತಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅದೇ ರೀತಿ ಆದರ್ಶ ದಂಪತಿಗಳು ಪ್ರಶಸ್ತಿಯನ್ನು ವಿತರಿಸಲಾಯಿತು. ಸಮಾರಂಭವನ್ನು ಇಲಕಲ್ನ ಚಿತ್ತರಗಿ ಮಹಾಸಂಸ್ಥಾನದ ಡಾ.ವಿಜಯಮಹಾಂತಶ್ರೀ ಉದ್ಘಾಟಿಸಿದರು. ಗುರುಮಹಾಂತ ಶ್ರೀ, ಕ್ಷೀರಲಿಂಗ ಶ್ರೀ ಸಾನಿಧ್ಯವಹಿಸಿದ್ದರು. ನಗರ ಶಾಸಕ ಡಾ. ಶಿವರಾಜ್ ಪಾಟೀಲ್, ಡಾ. ವಿ.ಎ. ಮಾಲಿಪಾಟೀಲ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸಿದ್ದಲಿಂಗೇಶ್ವರ, ಆರ್ ಡಿಎ ಮಾಜಿ ಅಧ್ಯಕ್ಷ ರಾಜಕುಮಾರ್, ಪ್ರಮುಖರಾದ ಜಿ. ತಿಮ್ಮಣ್ಣ, ಶರಣಪ್ಪ ಗೋನಾಳ, ಡಿ.ಎ. ಬಿರಾದಾರ್ ಪಾಲ್ಗೊಂಡಿದ್ದರು. ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ಜನತೆ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement