ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಹಟ್ಟಿ ಗಣಿ ಕಾರ್ಮಿಕನ ಸಾವು; ವೈದ್ಯಕೀಯ ಉಪಕರಣ ಧ್ವಂಸ

Srinivasa Murthy VN
Updated On : 28 Oct 2013, 11:30 am

ರಾಯಚೂರು: ಲಿಂಗಸ್ಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಕರ್ತವ್ಯದಲ್ಲಿದ್ದ ಕಾರ್ಮಿಕನೊಬ್ಬ ಹೃದಯಾಘಾತದಿಂದ ಸಾವಿಗೀಡಾಗಿದ್ದು, ಸೂಕ್ತ ಸಮಯಕ್ಕೆ ವೈದ್ಯರು ಚಿಕಿತ್ಸೆ ನೀಡಲಿಲ್ಲವೆಂದು ಆರೋಪಿಸಿ ಗಣಿ ಕಾರ್ಮಿಕರು ಕಂಪನಿ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿ ವೈದ್ಯಕೀಯ ಉಪಕರಣ ಧ್ವಂಸಗೊಳಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಮೃತ ಕಾರ್ಮಿಕನನ್ನು ಅಮರೇಶ್ ಎಂದು ಗುರುತಿಸಲಾಗಿದೆ. ಈತ ಶನಿವಾರ ಚಿನ್ನದ ಗಣಿಯಲ್ಲಿ ಎರಡನೇ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಹೃದಯಾಘಾತವಾಗಿದೆ. ಕೂಡಲೇ ಈತನನ್ನು ಗಣಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದರೂ ಅಮರೇಶ್ ಕೊನೆಯುಸಿರೆಳೆದಿದ್ದಾನೆ.
ವೈದ್ಯರ ನಿರ್ಲಕ್ಷ್ಯ ಕಾರಣ- ಆರೋಪ: ಆದರೆ ಆಸ್ಪತ್ರೆಯ ವೈದ್ಯರು ಸೂಕ್ತ ಚಿಕಿತ್ಸೆ ನೀಡಲಿಲ್ಲ ಎಂದು ಆರೋಪಿಸಿದ ಕಾರ್ಮಿಕರು ಕಾರ್ಮಿರು, ಗಣಿ ಕಂಪನಿಯ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿ ವೈದ್ಯಕೀಯ ಉಪಕರಣಗಳನ್ನು ಧ್ವಂಸಗೊಳಿಸಿ ಸುಮಾರು 5 ಲಕ್ಷ ಮೌಲ್ಯದ ಆಸ್ತಿಗೆ ಹಾನಿ ಮಾಡಿದ್ದಾರೆಂದು ಹೇಳಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಕಾರ್ಮಿಕ ಅಮರೇಶನ ಸಾವು ಸಂಭವಿಸಿದೆ ಎಂದು ಕಾರ್ಮಿಕರು ಈ ವೇಳೆ ಘೋಷಣೆ ಕೂಗಿದ್ದಾರೆ.
ಈ ನಂತರ ಆಸ್ಪತ್ರೆಯ ಮುಂಭಾಗದಲ್ಲಿ ಕಾರ್ಮಿಕರು ಧರಣಿ ನಡೆಸಿದರು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಗಣಿ ಕಂಪನಿಯ ಎಂಡಿ ವಾಲ್ಮೀಕಿ ಅವರು, ಸರ್ಕಾರದ ನಿಯಮಗಳಂತೆ ಮೃತ ವ್ಯಕ್ತಿಯ ಕುಟುಂಬದವರಿಗೆ ಪರಿಹಾರ ವಿತರಿಸಲಾಗುತ್ತದೆ. ಹಾಗೆಯೇ ವ್ಯಕ್ತಿಯೊಬ್ಬರಿಗೆ ಕೆಲಸ ನೀಡುವ ಭರವಸೆ ನೀಡಿದ ನಂತರ ಧರಣಿ ಹಿಂಪಡೆದರು.
ಈ ಮಧ್ಯೆ ಕಾರ್ಮಿಕರು ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ್ದರಿಂದ ಅಸಮಾಧಾನಗೊಂಡ ಆಸ್ಪತ್ರೆಯ ಸಿಬ್ಬಂದಿ ಭಾನುವಾರ ಮುಂಜಾನೆ ಆಸ್ಪತ್ರೆಯಲ್ಲಿ ಧರಣಿ ನಡೆಸಿ ಕಾರ್ಮಿಕರ ವರ್ತನೆ ಖಂಡಿಸಿ ಆಸ್ಪತ್ರೆ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement