ಆರೋಗ್ಯ ಮಾಹಿತಿ: 104ಕ್ಕೆ ಕರೆ ಮಾಡಿ
ರಾಯಚೂರು: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೌಲಭ್ಯ ದೊರೆಯಬೇಕೆಂಬ ಆಶಯದೊಂದಿಗೆ ಸಾರ್ವಜನಿಕರಿಗೆ ಆರೋಗ್ಯ ಸೇವಾ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಈಚೆಗೆ 104 ಆರೋಗ್ಯವಾಣಿ ಯೋಜನೆ ಜಾರಿಗೆ ತಂದಿದೆ.
ಆರೋಗ್ಯ ಚಿಕಿತ್ಸೆಗಾಗಿ ಸಕಾಲದಲ್ಲಿ ಆಸ್ಪತ್ರೆಗಳನ್ನು ತಲುಪಲು ಸಾಧ್ಯವಾಗದ ಗ್ರಾಮೀಣ ಜನರು ದೂರವಾಣಿ ಮುಖಾಂತರ ವೈದ್ಯರ ಸಲಹೆ ಪಡೆಯಲು ಈ 104ಕ್ಕೆ ಕರೆ ಮಾಡಬಹುದಾಗಿದೆ. ಆರೋಗ್ಯ ಸಲಹೆ, ಆಪ್ತ ಸಮಾಲೋಚನೆ, ಸೇವಾ ಸೌಲಭ್ಯಗಳ ಬಗ್ಗೆ ಮಾಹಿತಿ, ಆರೋಗ್ಯ ಸಂಸ್ಥೆ ಅಥವಾ ಸಿಬ್ಬಂದಿಯ ವಿರುದ್ಧ ದೂರು ದಾಖಲು ಸೇರಿ ಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ಸಾಮಾನ್ಯ ಕಾಯಿಲೆ ಮತ್ತಿತರೆ ಆರೋಗ್ಯ ಸಮಸ್ಯೆಗಳಿಗೆ ಸೂಕ್ತ ಔಷಧಿ ಶಿಫಾರಸು ಹಾಗೂ ಅವುಗಳ ಸೇವನೆಯ ಬಗ್ಗೆ ದೂರವಾಣಿ ಮೂಲಕವೇ ಸಲಹೆ ಪಡೆಯಲು ಯೋಜನೆ ನೆರವಾಗಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.