ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಆರ್ಥಿಕ ಸ್ವಾವಲಂಬನೆ ಸಾಧಿಸಿ: ಶೈಲಜಾ

Vishwanath S
Updated On : 31 Oct 2013, 12:21 pm

ಕನ್ನಡಪ್ರಭ ವಾರ್ತೆ ,  ಸಿಂಧನೂರು ,  ಅ.30
ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸಮಾಜದಲ್ಲಿ ಸ್ವಾವಲಂಬಿಗಳಾಗಿ ಬದುಕಲು ತರಬೇತಿಗಳು ಪೂರಕ. ಇವುಗಳ ಪ್ರಯೋಜನ ಪಡೆದು ಸ್ವಯಂ ಉದ್ಯೋಗ ಕಂಡುಕೊಳ್ಳಬೇಕು ಎಂದು ರಾಯಚೂರಿನ ಎಸ್‌ಬಿಎಚ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕಿ ಶೈಲಜಾ ಕರೆ ನೀಡಿದರು.
ತಾಲೂಕಿನ ಬಳಗಾನೂರು ದೇವಾಂಗ ಸಮುದಾಯ ಭವನದಲ್ಲಿ ರಾಯಚೂರಿನ ಎಸ್‌ಬಿಎಚ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಹಮ್ಮಿಕೊಂಡ ಮಹಿಳೆಯರಿಗಾಗಿ ಉಚಿತ ಹೊಲಿಗೆ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.
ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆ ಸ್ವತಂತ್ರವಾಗಿ ಜೀವನ ಸಾಗಿಸಲು, ಸ್ವಂತ ಉದ್ಯೋಗ ಹೊಂದಲು, ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಪರಿಣಿತಿ ಹೊಂದಿ ಬ್ಯಾಂಕುಗಲು ಮತ್ತು ಸರ್ಕಾರದ ಸೌಲಭ್ಯ ಪಡೆದು ಉದ್ಯೋಗ ಆರಂಭಿಸಿ ಯಶಸ್ವಿಯಾಗುವಂತೆ ಸಲಹೆ ನೀಡಿದರು.
ಕಾರ್ಯಕ್ರಮ ಕುರಿತು ಸಹಕಾರಿ ಬ್ಯಾಂಕಿನ ಮಾಜಿ ಅಧ್ಯಕ್ಷ ಡಾ. ಎಸ್.ಎಸ್. ಜಾಗೀರದಾರ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸಂಸ್ಥೆಯ ನಿರ್ದೇಶಕ ಮಾನಪ್ಪ ದಾಸರ, ಕೃಷಿ ಪತ್ತಿನ ಸಹಕಾರಿ ಸಂಘದ ನಿಯಮಿತದ ಅಧ್ಯಕ್ಷ ರಾಘವೇಂದ್ರರಾವ್ ಕುಲಕರ್ಣಿ ಶಿಬಿರ ಕುರಿತು ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಗಿರಿಜಮ್ಮ ಗುತ್ತೇದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ತಾಪಂ ಸದಸ್ಯೆ ಬಾಲಮ್ಮ ನಾಗಪ್ಪ, ನೇಕಾರರ ಒಕ್ಕೂಟದ ಯುವ ಅಧ್ಯಕ್ಷ ಬಸವರಾಜ ಕರಡಕಲ್, ಗ್ರಾಪಂ ಸದಸ್ಯೆ ಶ್ರೀದೇವಿ ಕಮ್ಮಾರ, ಹಿರಿಯ ಛಾಯಾಗ್ರಾಹಕ ಕೃಷ್ಣ, ಪತ್ರಕರ್ತ ಹನುಮೇಶ ಕಮ್ಮಾರ, ಶಿಬಿರಾರ್ಥಿಗಳು ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement