ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

'ಖಾತ್ರಿ' ಬಿಲ್ ತಡೆಗೆ ಆಗ್ರಹ

Vishwanath S
Updated On : 2 Sept 2013, 11:45 am

ಕನ್ನಡಪ್ರಭ ವಾರ್ತೆ , ರಾಯಚೂರು ,ಸೆ.1
ತಾಲೂಕಿನ ಬಾಯಿದೊಡ್ಡಿ ಗ್ರಾಮ ಪಂಚಾಯಿತಿಯಲ್ಲಿ ಪ್ರಸಕ್ತ ಸಾಲಿಗೆ ಕೈಗೊಂಡ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳ ಬಿಲ್ ತಡೆ ಹಿಡಿಯುವಂತೆ ಕರ್ನಾಟಕ ಜನಶಕ್ತಿ ಸಂಘಟನೆ ಒತ್ತಾಯಿಸಿದೆ.
ಈ ಕುರಿತು ಇತ್ತೀಚೆಗೆ ಜಿಪಂ ಸಿಇಒ ಡಾ. ಮುದ್ದುಮೋಹನ್ ಅವರಿಗೆ ದೂರು ಸಲ್ಲಿಸಿ, ಉದ್ಯೋಗ ಖಾತ್ರಿ ಯೋಜನೆ ಅಡಿ 2013- 14ನೇ ಸಾಲಿಗೆ ಬಾಯಿದೊಡ್ಡಿ ಗ್ರಾಪಂನಲ್ಲಿ ಯಾವುದೇ ಗ್ರಾಮಸಭೆ ಕರೆಯದೇ ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಹಣ ಕೊಳ್ಳೆ ಹೊಡೆಯುವ ತಂತ್ರ: ಕ್ರಿಯಾಯೋಜನೆಯಲ್ಲಿ ಗ್ರಾಪಂ ಅಧ್ಯಕ್ಷ, ಪಿಡಿಒ, ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸೇರಿ ನಿರ್ಧರಿಸಿದ ಕೆಲಸ ಮಾತ್ರ ನಿರ್ವಹಿಸಲು ನಿರ್ಧರಿಸಲಾಗಿದೆ. ಈ ಮೂಲಕ ಖೊಟ್ಟಿ ಬಿಲ್ ಸೃಷ್ಟಿಸಿ ಹಣ ಕೊಳ್ಳೆ ಹೊಡೆಯುವ ತಂತ್ರ ಅಡಗಿದೆ ಎಂದು ಆರೋಪಿಸಿದ್ದಾರೆ.
ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಮಸಭೆ ನಡೆಸದೇ ಹಾಗೂ ಗ್ರಾಮದ ನಿವಾಸಿಗಳಿಗೆ ಮಾಹಿತಿ ನೀಡದಂತೆ ಕ್ರಿಯಾ ಯೋಜನೆ ತಯಾರಿಸಿದ್ದು, ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಳ್ಳುವ ತಂತ್ರ ಇದಾಗಿದೆ. ಈ ಹಿನ್ನೆಲೆಯಲ್ಲಿ ಜಿಪಂ ಅಧಿಕಾರಿಗಳು ಗ್ರಾಪಂಗೆ ಭೇಟಿ ನೀಡಿ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿ ಪರೀಶಿಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅಕ್ರಮಕ್ಕೆ ಅವಕಾಶ ಕೊಡಬೇಡಿ: ಅಕ್ರಮವಾಗಿ ಅನುದಾನ ದುರ್ಬಳಕೆಗೆ ಮೇಲಧಿಕಾರಿಗಳು ಯಾವುದೇ ರೀತಿಯಿಂದ ಅವಕಾಶ ಕಲ್ಪಿಸದಂತೆ ಸಂಘಟನೆಯ ತಾಲೂಕು ಅಧ್ಯಕ್ಷ ಕೆ.ಮಲ್ಲೇಶ್, ವೀರೇಶ್, ಮಲ್ಲಯ್ಯ, ಶಂಕರ್, ಯಂಕನಗೌಡ, ನರಸನಗೌಡ, ಹುಸೇನ್ ಬಾಷಾ, ರಫಿ ಮತ್ತಿತರರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement