ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಜಿಲ್ಲಾ ಅತ್ಯುತ್ತಮ ಶಿಕ್ಷಕರು

Lingaraj Badiger
Updated On : 3 Sept 2013, 11:19 am

ಕನ್ನಡಪ್ರಭ ವಾರ್ತೆ, ರಾಯಚೂರು, ಆ.2
ಜಿಲ್ಲೆಯಲ್ಲಿ 2013- 14ನೇ ಸಾಲಿನ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ನೀಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ತಾಲೂಕಿಗೆ ಒಬ್ಬರಂತೆ ಆಯ್ಕೆ ಮಾಡಿ ಡಿಡಿಪಿಐ ಪಟ್ಟಿ ಪ್ರಕಟಿಸಿದ್ದಾರೆ. ಪ್ರಶಸ್ತಿ ವಿಜೇತರ ಪಟ್ಟಿ ಇಂತಿದೆ.
ಪ್ರಾಥಮಿಕ ಶಾಲೆ ವಿಭಾಗ: ದೇವದುರ್ಗ ತಾಲೂಕಿನ ಅಗ್ರಿ ಕ್ಯಾಂಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ದೇವೇಂದ್ರ ಕುಮಾರ, ಲಿಂಗಸ್ಗೂರು ತಾಲೂಕಿನ ನಾಗರಹಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ರಾಜನಗೌಡ, ಮಾನವಿಯ ಅಡವಿ ಅಮರೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಪಿ.ಎಂ.ಯಲ್ಲಪ್ಪ, ರಾಯಚೂರು ನಗರದ ಕೆಇಬಿ ಶಾಲೆಯ ಸಹಶಿಕ್ಷಕ ರಜ್ಜಬ್ ಅಲಿ ಹಾಗೂ ಸಿಂಧನೂರು ತಾಲೂಕಿನ ಆರ್‌ಎಚ್ ನಂ.2ರ ಶಾಲೆಯ ಸಹ ಶಿಕ್ಷಕ ಚಂದ್ರಪ್ಪ ಹೂಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರೌಢ ಶಾಲೆಯ ವಿಭಾಗ: ದೇವದುರ್ಗದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಪದ್ಮಜಾ, ಲಿಂಗಸ್ಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕ ಡಾ. ನಿಂಗಪ್ಪ ಎಚ್. ಪೂಜಾರ, ಮಾನವಿ ತಾಲೂಕಿನ ಕಲ್ಲೂರು ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ನಾಗೇಶ್, ರಾಯಚೂರು ತಾಲೂಕಿನ ಸಿಂಗನೋಡಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ರಾಜಕುಮಾರ, ಸಿಂಧನೂರು ತಾಲೂಕಿನ ಅಂಬಾಮಠದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಶಿಕ್ಷಕ ಸಂಗಮೇಶ ಕೋಟೆ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಡಿಡಿಪಿಐ ತಿಳಿಸಿದ್ದಾರೆ.
ನಗರದ ರಂಗಮಂದಿರದಲ್ಲಿ ಸೆ. 5ರಂದು ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರು ಹಾಜರಿರುವಂತೆ ಡಿಡಿಪಿಐ ಸೂಚಿಸಿದ್ದಾರೆ.
ಅತ್ಯುತ್ತಮ ಶಿಕ್ಷಕರು: ರಾಯಚೂರು ತಾಲೂಕಿನ ಅತ್ಯುತ್ತಮ ಶಿಕ್ಷಕರೆಂದು ಪ್ರಾಥಮಿಕ ವಿಭಾಗದಲ್ಲಿ ಮೂರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಮೂವರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.
ಪ್ರಾಥಮಿಕ ಶಾಲಾ ವಿಭಾಗ: ನಗರದ ಸ್ಟೇಷನ್ ಬಜಾರ್ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಪಾರ್ವತಿ, ಉಡುಮಗಲ್ ಖಾನಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಸಾವಿತ್ರಿ, ಗಾಣದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಮೋಹನ್ ಬಾವಿಮನಿ.
ಪ್ರೌಢ ಶಾಲಾ ವಿಭಾಗ: ಉಡುಮಗಲ್ ಖಾನಾಪುರದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ರವಿ, ದೇವಸೂಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕಿ ಮಂಜುಳಾ ಹಿರೇಮಠ್, ಯರಮರಸ್ ಕ್ಯಾಂಪಿನ ಸರ್ಕಾರಿ ಪ್ರೌಢ ಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ಜಯಶ್ರೀ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement