ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಜಿಲ್ಲಾ ಸಮಿತಿ ರಚನೆ: ಇಂದು ಸಭೆ

Lingaraj Badiger
Updated On : 5 Sept 2013, 10:56 am

ರಾಯಚೂರು: ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನು ಗುರುತಿಸುವ ಸಲುವಾಗಿ ಸಾಮಾಜಿಕ, ಆರ್ಥಿಕ ಮತ್ತು ಜಾತಿಗಣತಿ ಪರಿಣಾಮಕಾರಿಯಾಗಿ ನಡೆಸುವ ಬಗ್ಗೆ ಜಿಲ್ಲಾಮಟ್ಟದ ಸಮಿತಿ ರಚಿಸಲಾಗಿದೆ.
ಸಮಿತಿಗೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅಧ್ಯಕ್ಷರಾಗಿರುತ್ತಾರೆ. ಜಿಪಂ ಸಿಇಒ ಡಾ. ಮುದ್ದುಮೋಹನ್ ಅವರ ಉಪಾಧ್ಯಕ್ಷರಾಗಿದ್ದಾರೆ. ಸದಸ್ಯರಾಗಿ ಜಿಲ್ಲಾ ಎಸ್ಪಿ ಎಂ.ಎನ್. ನಾಗರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾರಾಯಣಪ್ಪ, ಡಿಡಿಪಿಐ ಪರಮೇಶ್, ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಮಿತಿಯಲ್ಲಿದ್ದಾರೆ.
ಸಭೆ: ಸಾಮಾಜಿಕ, ಆರ್ಥಿಕ ಗಣತಿ ಕಾರ್ಯದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಸೆ.5 ರಂದು ಕರೆಯಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂದು ಮಧ್ಯಾಹ್ನ 3ಕ್ಕೆ ಸಭೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement