ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿವಿಧೆಡೆ ಶಿಕ್ಷಕರ ದಿನಾಚರಣೆ: ಪುರಸ್ಕಾರ

Mainashree
Updated On : 8 Sept 2013, 10:53 am

ಕನ್ನಡಪ್ರಭ ವಾರ್ತೆ  ರಾಯಚೂರು  ಸೆ.8
ನಗರದ ವಿವೇಕಾನಂದ ರೂರಲ್ ಎಜುಕೇಷನ್ ಟ್ರಸ್ಟ್‌ನ ವಿವೇಕಾನಂದ ಡಿಇಡಿ ಕಾಲೇಜಿನಲ್ಲಿ ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮೆಥೋಡಿಸ್ಟ್ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಶಾಂತರಾಜ್ ಅವರು ಮುಖ್ಯಅತಿಥಿಯಾಗಿ ಪಾಲ್ಗೊಂಡು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳನ್ನು ಶಿಕ್ಷಣಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಅಧ್ಯಕ್ಷತೆಯನ್ನು ಡಿಇಡಿ ಕಾಲೇಜಿನ ಪ್ರಾಚಾರ್ಯ ಶಾಮಣ್ಣ ಮದ್ದೂರು ವಹಿಸಿದ್ದರು.
ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ವಿಜಯಲಕ್ಷ್ಮಿ ಪಾಸೋಡಿ, ಹನುಮಂತರಾವ್ ಪಾಸೋಡಿ, ಗೋವಿಂದರಾಜ್ ಮಾತನಾಡಿದರು. ಉಪನ್ಯಾಸಕ ಅನಿಲ್‌ಕುಮಾರ್, ಮಹಾದೇವಮ್ಮ ಪಾಲ್ಗೊಂಡಿದ್ದರು. ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಪಾಲಿಟೆಕ್ನಿಕ್ ಕಾಲೇಜು: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿ ಸಂಘ ಹಾಗೂ ಕ್ರೀಡಾ ಸಂಘದ ಉದ್ಘಾಟನೆ ಮತ್ತು ಶಿಕ್ಷಕರ ದಿನಾಚರಣೆ ಸಮಾರಂಭ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆನಂದ ಜೂಕೂರು, ನಿವೃತ್ತ ಶಿಕ್ಷಕ ರಘುನಾಥರಾವ್ ಆಗಮಿಸಿ ಮಾತನಾಡಿ, ವಿದ್ಯಾರ್ಥಿ ಮತ್ತು ಶಿಕ್ಷಕರ ಸಂಬಂಧ ಅನನ್ಯವಾದದ್ದು. ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ದೇಶದ ಪ್ರಗತಿಗೆ ಪೂರಕವಾಗಿ ವಿದ್ಯಾರ್ಥಿಗಳು ಪ್ರಗತಿ ಸಾಧಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯ ಎನ್.ಆರ್.ಬಾಗೋಜಿ ವಹಿಸಿದ್ದರು. ಕುಲಸಚಿವ ದೇವೇಂದ್ರಪ್ಪ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಅಧಿಕಾರಿ ನೀಲಕಂಠ, ಕ್ರೀಡಾಧಿಕಾರಿ ಎಸ್.ಜೆ. ಪ್ರಕಾಶ್ ಸೇರಿ ಕಾಲೇಜಿನ ಬೋಧಕ ವರ್ಗ ಮತ್ತು ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು.
ಮರ್ಚೆಡ್: ತಾಲೂಕಿನ ಮರ್ಚೆಡ್ ಗ್ರಾಮದ ಕುವೆಂಪು ಹಿರಿಯ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ನೆಹರು ಯುವಕ ಮಂಡಳಿ ವತಿಯಿಂದ ಶಿಕ್ಷಕರ ದಿನಾಚರಣೆ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಶಿಕ್ಷಕ ರತ್ನ ಪ್ರಶಸ್ತಿ ವಿಜೇತ ಶಿಕ್ಷಕಿ ಸವಿತಾ ಅವರನ್ನು ಸನ್ಮಾನಿಸಲಾಯಿತು.
ಶಿಕ್ಷಕ ಖಾಸಿಂ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು, ಉರ್ದು ಶಾಲೆಯ ಮುಖ್ಯಗುರು, ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಅಧ್ಯಕ್ಷ ದಾನಪ್ಪ, ನೆಹರು ಯುವಕ ಮಂಡಳಿಯ ಸದಸ್ಯರಾದ ಉಪೇಂದ್ರ, ನರಸರೆಡ್ಡಿ, ಮಹೆಬೂಬ್, ನರಸಿಂಹಲು, ಶಿವಪ್ರಕಾಶ್ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement