ಉತ್ತಮ ಆರೋಗ್ಯ ಶೈಕ್ಷಣಿಕ ಪ್ರಗತಿಗೆ ಸಹಕಾರಿ
ಲಿಂಗಸ್ಗೂರು: ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಂಡರೆ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ಸಲಹೆ ನೀಡಿದರು.
ಪಟ್ಟಣದ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬುಧವಾರ 2013- 14ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ತಾಲೂಕಿನ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಾಧನೆಗೈಯುತ್ತಿರುವುದು ಸಂಸತದ ಸಂಗತಿ. ವಿದ್ಯಾರ್ಥಿಗಳ ಸಾಧನೆಗೆ ದೈಹಿಕ ಶಿಕ್ಷಕರ ಪರಿಶ್ರಮ ಶ್ಲಾಘನೀಯವಾಗಿದೆ ಎಂದರು.
ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಉತ್ತಮ ಸಾಧನೆಗೈಯುವ ಮೂಲಕ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸುವ ಮೂಲಕ ತಮ್ಮ ತಮ್ಮ ಶಾಲೆಗಳ ಕೀರ್ತಿ ತರಬೇಕೆಂದರು.
ಸಹಾಯಕ ಆಯುಕ್ತ ಟಿ.ಯೋಗೇಶ್, ಬಿಇಒ ಅಮರಪ್ಪ ಭೋವಿ, ದೈಹಿಕ ಶಿಕ್ಷಣಾಧಿಕಾರಿ ಬಸವರಾಜ ಮೂಲಿಮನಿ, ನೌಕರರ ಸಂಘದ ಅಧ್ಯಕ್ಷ ಭೀಮಪ್ಪ ನಾಯಕ, ಎಸ್ಡಿಎಂಸಿ ಅಧ್ಯಕ್ಷ ಜಯಪ್ರಕಾಶ ಪಾಟೀಲ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಯೋಗಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭು ಗದ್ದಿ, ಸಹಶಿಕ್ಷಕರ ಸಂಘದ ಅಧ್ಯಕ್ಷ ಗದ್ದೆಪ್ಪ, ಮುಖ್ಯಗುರುಗಳ ಸಂಘದ ಅಧ್ಯಕ್ಷ ಸಿದ್ರಾಮಪ್ಪ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಮನಗೌಡ ಸೇರಿದಂತೆ ಇದ್ದರು.