ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮಳೆ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು; ದೂರು

Lingaraj Badiger
Updated On : 17 Sept 2013, 10:59 am

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದ ಅಲೆಮಾರಿ ಜನಾಂಗದವರು ವಾಸವಾಗಿರುವ ಪ್ರದೇಶಕ್ಕೆ ಈಚೆಗೆ ಭಾರೀ ಮಳೆ ಸುರಿದಿದ್ದರಿಂದ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.
ಮಳೆ ನೀರು ನುಗ್ಗಿದ್ದರಿಂದ 30 ಕೋಳಿ, 2 ಮೇಕೆ ಮರಿಗಳು ಸಾವಿಗೀಡಾಗಿವೆ ಎಂದು ದೂರಿರುವ ನಿವಾಸಿಗಳು, ಶನಿವಾರ ರಾತ್ರಿ ಸುರಿದ ಮಳೆಯಿಂದ ಅಲೆಮಾರಿ ಬುಡಗ ಜಂಗಮ ಗುಡಿಸಲುಗಳಿಗೆ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿದ್ದರಿಂದ ಅಪಾರ ಹಾನಿ ಸಂಭವಿಸಿದೆ. ಗುಡಿಸಲುಗಳಲ್ಲಿ ಇದ್ದ ಬತ್ತ, ಅಕ್ಕಿ, ಜೋಳ ಸೇರಿ ಬಟ್ಟೆ ಮತ್ತು ಸಾಮಗ್ರಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಜೀವನ ನಿರ್ವಹಣೆ ಕಷ್ಟವಾಗಿದೆ. ಸಂಕಷ್ಟದಲ್ಲಿರುವ ತಮಗೆ ಗಬ್ಬೂರು ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗರನ್ನು ಹೊರತುಪಡಿಸಿ ಯಾವೊಬ್ಬ ಅಧಿಕಾರಿಯೂ ತಮ್ಮ ಸಮಸ್ಯೆ ಆಲಿಸಿಲ್ಲ ಎಂದು ದೂರಿದ್ದಾರೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement