ಬೈಕ್ ಪಲ್ಟಿ: ಸವಾರ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಶ್ರೀಪುರಂ ಜಂಕ್ಷನ್ ಬಳಿ ಬೈಕ್ ಸ್ಕಿಡ್ ಆಗಿ ಸವಾರ ಸಾವಿಗೀಡಾಗಿದ್ದಾನೆ. ಮೃತನನ್ನು ಮಂಜುನಾಥ ಎಂದು ಗುರುತಿಸಲಾಗಿದೆ. ಈತ ಬೈಕ್ನಲ್ಲಿ ಸಾಗುತ್ತಿದ್ದಾಗ ಕೃಷ್ಣದೇವರಾಯ ಶಾಲೆಯ ಕ್ರಾಸ್ ಬಳಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗಿಗೆ ನುಗ್ಗಿದ್ದರಿಂದ ಬೈಕ್ ಸವಾರ ಮಂಜುನಾಥ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.