ವಿಕಲಚೇತನರ ವಿವಾಹಕ್ಕೆ ಪ್ರೋತ್ಸಾಹಧನ
ರಾಯಚೂರು: ವಿಕಲಚೇತನ ಯುವಕ- ಯುವತಿಯರನ್ನು ಸಾಮಾನ್ಯ ವ್ಯಕ್ತಿಗಳು ಮದುವೆಯಾದರೆ ಸರ್ಕಾರ ಅಂಥವರಿಗೆ 50 ಸಾವಿರ ಹೂಡಿಕೆಯ ಮೂಲಕ ಪಾವತಿಸುವ ಯೋಜನೆ ಜಾರಿಗೆ ತಂದಿದೆ. ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸಲು ಕೋರಲಾಗಿದೆ.
ನಾಳೆಯಿಂದ ಕಾನೂನು ಅರಿವು ಕಾರ್ಯಕ್ರಮ
ರಾಯಚೂರು: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ತಾರಾನಾಥ ಶಿಕ್ಷಣ ಸಂಸ್ಥೆಯ ಶೇಠ್ ರಿಖಬ್ ಚಂದ್ ಪಾರಸಮಲ್ ಸುಖಾಣಿ ಪದವಿ ಪೂರ್ವ ಕಾಲೇಜು, ಎಲ್ವಿಡಿ ಪದವಿ ಪೂರ್ವ ಕಾಲೇಜು ಇವರ ಆಶ್ರಯದಲ್ಲಿ ಸೆ.25ರಂದು ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.30ಕ್ಕೆ ಎಸ್ಆರ್ಪಿಎಸ್ ಕಾಲೇಜಿನಲ್ಲಿ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಪಿ. ಕೃಷ್ಣಭಟ್ ನೆರವೇರಿಸುವರು. ಅಧ್ಯಕ್ಷತೆಯನ್ನು ಮಸ್ಕಿ ನಾಗರಾಜ್ ವಕೀಲರು ವಹಿಸುವರು. ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ರಾಜಾ ಪಾಂಡುರಂಗನಾಯಕ ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆ. ಸೆ.26ರಂದು ಸಂಜೆ 5.45ಕ್ಕೆ ಜಿಲ್ಲಾ ಕಾರಾಗೃಹದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಯಲಿದೆ.