ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್, ಡಿಜಿಟಲ್ ಕ್ಯಾಮೆರಾ: ಅರ್ಜಿ

Rashmi Kasaragodu
Updated On : 25 Sept 2013, 11:40 am

ರಾಯಚೂರು: ವಿಶೇಷ ಘಟಕ ಯೋಜನೆಯಡಿ ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ವಾರ್ತಾ ಇಲಾಖೆಯಿಂದ ಲ್ಯಾಪ್ ಟಾಪ್, ಡಿಜಿಟಲ್ ಕ್ಯಾಮೆರಾ ವಿತರಿಸುವ ಯೋಜನೆ ಜಾರಿಗೆ ತರಲಾಗುತ್ತಿದ್ದು, ವಿದ್ಯಾರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಪ್ರಸ್ತುತ ಸಾಲಿನಲ್ಲಿ ಪತ್ರಿಕೋದ್ಯಮ 'ಸಮೂಹ ಸಂವಹನ' ವಿದ್ಯುನ್ಮಾನ ಮಾಧ್ಯಮ ಅಧ್ಯಯನ ವಿಷಯಗಳಲ್ಲಿ ಪೂರ್ಣಾವಧಿ ಪದವಿ ಅಥವಾ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದು ಮೊದಲ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಹಾಗೂ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಒಟ್ಟಾರೆ ಕನಿಷ್ಠ ಶೇ.50ರಷ್ಟು ಅಂಕ ಪಡೆದಿರುವ ವಿದ್ಯಾರ್ಥಿಗಳು ಈ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಅನ್ವಯ: ಈ ಯೋಜನೆಯು ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಹಾಗೂ ಪತ್ರಿಕೋದ್ಯಮ ಐಚ್ಛಿಕ ವಿಷಯ ವಾಗಿ ನೀಡುವ ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ದೂರಶಿಕ್ಷಣ ಅಥವಾ ಡಿಪ್ಲೊಮಾ ವ್ಯಾಸಂಗ ಮಾಡುತ್ತಿರುವವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ.
ವಿದ್ಯಾರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಪದವಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಕ್ಯಾಮೆರಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡವಾರು ವಿವರಗಳೊಂದಿಗೆ ಪಟ್ಟಿಯನ್ನು ಸಂಬಂಧಿಸಿದ ವಿಶ್ವವಿದ್ಯಾನಿಲಯದ ವಿಭಾಗ ಮುಖ್ಯಸ್ಥರು ಅಥವಾ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರಿಂದ ಪಡೆಯುವ ನಿಟ್ಟಿನಲ್ಲಿ ಇಲಾಖೆ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಳಿಂದ ನೇರವಾಗಿ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ವಾರ್ತಾ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement