ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಆಮಿಷಕ್ಕೆ ಬಲಿಯಾಗದಿರಿ: ಎಸಿ

Rashmi Kasaragodu
Updated On : 3 Apr 2014, 2:12 am

ಲಿಂಗಸ್ಗೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುವ ಪ್ರತಿಯೊಂದು ಚುನಾವಣೆಯಲ್ಲಿ ಮತದಾರರು ಕಡ್ಡಾಯವಾಗಿ ಹಾಗೂ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುವಂತೆ ಸಹಾಯಕ ಚುನಾವಣಾಧಿಕಾರಿ, ಎಸಿ ಯೋಗೇಶ್ ಕರೆ ನೀಡಿದರು.
ಪಟ್ಟಣದ ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕಾರ್ಮಿಕರ ಸಹಯೋಗದಿಂದ ಬುಧವಾರ ಹಮ್ಮಿಕೊಂಡಿದ್ದ ಪುರಸಭೆ ವ್ಯಾಪ್ತಿಯ ಎಲ್ಲ ವಾರ್ಡುಗಳಲ್ಲಿ ಮತದಾನ ಜಾಗೃತಿ ಅಭಿಯಾನ ಆರಂಭಕ್ಕೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಿ ಚಾಲನೆ ನೀಡಿದರು.
ಕಳೆದ ಚುನಾವಣೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳ 20 ಮತಗಟ್ಟೆ ಕೇಂದ್ರಗಳಲ್ಲಿ ಅತಿ ಕಡಿಮೆ ಮತದಾನವಾಗಿದೆ. ಅಂತಹ ಮತಗಟ್ಟೆಗಳ ಪೈಕಿ ಪಟ್ಟಣದ ಪುರಸಭೆ ವ್ಯಾಪ್ತಿಯ 10 ಮತಗಟ್ಟೆ ಕೇಂದ್ರಗಳಲ್ಲಿ ಕಡಿಮೆ ಮತದಾನವಾಗಿದೆ. ಈ ಬಾರಿ ಅತಿಹೆಚ್ಚು ಮತದಾನವಾಗುವಂತೆ ಜಾಗೃತಿ ಮೂಡಿಸಬೇಕೆಂದು ಕರೆ ನೀಡಿದರು. ಪುರಸಭೆ ಮುಖ್ಯಾಧಿಕಾರಿ ಈರಣ್ಣ ಬಿರಾದಾರ್, ಸಿಬ್ಬಂದಿ ಜಗನ್ನಾಥ ಕುಲ್ಕರ್ಣಿ, ಶಿವಲಿಂಗ ಮೇಗಳಮನಿ, ರಾಜಗೋಪಾಲ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement