ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕಡ್ಡಾಯ ಮತದಾನಕ್ಕೆ ಡಿಸಿ ಸಲಹೆ

Rashmi Kasaragodu
Updated On : 3 Apr 2014, 2:12 am

ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಇತ್ತೀಚೆಗೆ ಜಿ.ಪಂ. ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ನೇತೃತ್ವದ ಮಹಾಶೈವ ಧರ್ಮಪೀಠ, ಕೈಲಾಸ ಭವನ ಹಾಗೂ ವಿಶ್ವೇಶ್ವರ ಶಿವ, ಮಂದಿರ, ವಿಶ್ವೇಶ್ವರಿ ದುರ್ಗಾ ಮಂದಿರ, ನಂದಿ ಮಂಟಪ ಉದ್ಘಾಟನೆ ಹಾಗೂ ಮಹಾಶೈವ ಧರ್ಮಪೀಠದ ಪರಿಚಯ ಪುಸ್ತಕ, ಮಹಾಶೈವ ಧರ್ಮಪೀಠ ಗ್ರಾಮೀಣಾಭಿವೃದ್ಧಿ ಯೋಜನೆ ಮತ್ತು ಮಹಾಶೈವ ಧರ್ಮಪೀಠ ಕ್ಷೇತ್ರ ಸೇವಾ ಯೋಜನೆ ಮತ್ತು ಮತದಾರರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಯೊಬ್ಬರನ್ನೂ ಸನ್ಮಾರ್ಗದಲ್ಲಿ ಕೊಂಡೊಯ್ಯುವುದೇ ನಿಜವಾದ ಧರ್ಮ. ಧರ್ಮ ತತ್ವಗಳನ್ನು ಸರಿಯಾಗಿ ಅರ್ಥೈಸಿಕೊಂಡು, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಲೋಕಸಭೆ ಚುನಾವಣೆಯಲ್ಲಿ ಏ.17ರಂದು ಮತದಾರರು ಕಡ್ಡಾಯ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಬೇಕು ಎಂದರು.
ಜಿಪಂ ಸಿಇಒ ವಿಜಯ ಜ್ಯೋತ್ಸ್ನಾ ಮಾತನಾಡಿದರು. ಜಿಲ್ಲಾ ಎಸ್ಪಿ ಎಂ.ಎನ್. ನಾಗರಾಜ, ಸಹಾಯಕ ಆಯುಕ್ತ ಎಂ.ಪಿ. ಮಾರುತಿ, ಜಿಪಂ ಮುಖ್ಯ ಯೋಜನಾಧಿಕಾರಿ ಡಾ. ಟಿ. ರೋಣಿ, ಡಿಡಿಪಿಐ ರಾಮಾಂಜನೇಯ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆರ್. ಇಂದಿರಾ ಮಾತನಾಡಿದರು. ಅಧ್ಯಕ್ಷತೆಯನ್ನು ಮಹಾಶೈವ ಧರ್ಮಪೀಠದ ಪೀಠಾಧ್ಯಕ್ಷ ಮುಕ್ಕಣ್ಣ ಕರಿಗಾರ ವಹಿಸಿದ್ದರು. ಡಾ. ಆರ್. ನಾರಾಯಣ, ನಿಜಲಿಂಗಪ್ಪ, ಟಿ. ಕನುಮಪ್ಪ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement