ಪ್ರತಿಜ್ಞಾ ವಿಧಿ ಸ್ವೀಕಾರ
ರಾಯಚೂರು: ಇಲ್ಲಿನ ಎಲ್ಬಿಎಸ್ ನಗರದಲ್ಲಿ ಕಡ್ಡಾಯ ಮತದಾನ ಜಾಗೃತಿ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಕಾರ್ಮಿಕ ಇಲಾಖೆ ಹಾಗೂ ರಾಷ್ಟ್ರಿಯ ಬಾಲ ಕಾರ್ಮಿಕ ಯೋಜನೆ ಅವರುಗಳ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 18 ವಯಸ್ಸು ಮೀರಿದ ಎಲ್ಲರೂ ಕಡ್ಡಾಯ ಮತದಾನ ಮಾಡಬೇಕೆಂದು ಕಾರ್ಮಿಕ ಅಧಿಕಾರಿ ಆರತಿ ಮನವಿ ಮಾಡಿದರು. ಈ ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕರು, ಬಾಲ ಕಾರ್ಮಿಕ ಯೋಜನಾಧಿಕಾರಿಗಳು ಸೇರಿದಂತೆ ಕಾರ್ಮಿಕ ಇಲಾಖೆ ಸಿಬ್ಬಂದಿಯಿದ್ದರು. ಎಲ್ಬಿಎಸ್ ನಗರದ ಬೀದಿಗಳಲ್ಲಿ ಜಾಥಾ ನಡೆಸಲಾಯಿತು. ಮತದಾನ ಯಂತ್ರದ ಮಾದರಿ ಪ್ರದರ್ಶಿಸಿ ಮತದಾನ ಮಾಡುವ ಬಗೆಯ ಕುರಿತು ಮಾಹಿತಿ ನೀಡಲಾಯಿತು. ನಂತರ ಮಾರೆಮ್ಮ ದೇವಿ ದೇವಸ್ಥಾನದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.