ಸೊಳ್ಳೆಗಳ ನಿಯಂತ್ರಣಕ್ಕೆ ಮುಂದಾಗಿ
ಸಿಂಧನೂರು: ಸಮುದಾಯದ ಪ್ರತಿಯೊಬ್ಬ ವ್ಯಕ್ತಿಯು ತನ್ನ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಸೊಳ್ಳೆಗಳ ನಿಯಂತ್ರಣಕ್ಕೆ ಸಾರ್ವಜನಿಕರು ಮುಂದಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಆರ್. ನಾರಾಯಣಪ್ಪ ಸಲಹೆ ನೀಡಿದರು.
ಜಿಪಂ, ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಜಿಲ್ಲಾ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆ ಆಶ್ರಯದಲ್ಲಿ ಜರುಗಿದ ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ನಂತರ ಹಮ್ಮಿಕೊಂಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ ನರಸಿಂಹಲು, ಜಿಲ್ಲಾ ಯೋಜನಾ ವ್ಯವಸ್ಥಾಪನಾ ಅಧಿಕಾರಿ ಡಾ.ನಾಗರಾಜ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ ಕೆ. ವಿಜಯಾ, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ ಸುರೇಂದ್ರ ಬಾಬು, ತಾಲೂಕಾ ಆರೋಗ್ಯ ಅಧಿಕಾರಿ ಡಾ ಸೈಯದ್ ಹಸನ್ ಹುಸೇನಿ, ಜಿಲಾ ಆರೋಗ್ಯ ಶಿಕ್ಷಣಾಧಿಕಾರಿ ಪವಾಡೆಪ್ಪ ಇತರರು ಇದ್ದರು. ಮಹಾದೇವಿ ಪ್ರಾರ್ಥಿಸಿ, ಡಾ ಸುರೇಂದ್ರ ಬಾಬು ಸ್ವಾಗತಿಸಿದರು. ಡಾ ಸೈಯದ್ ಹಸನ್ ಹುಸೇನಿ ವಂದಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ನಿರೂಪಿಸಿದರು.
ಜಾಥಾ: ಕಾರ್ಯಕ್ರಮ ಪೂರ್ವದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಹಾಗೂ ಮತದಾನ ಕುರಿತು ಜಾಗೃತಿ ಜಾಥಾದಲ್ಲಿ ಆರೋಗ್ಯ ಇಲಾಖೆ ಎಲ್ಲ ಸಿಬ್ಬಂದಿ ಪಾಲ್ಗೊಂಡಿದ್ದರು. ರಾಯಚೂರು ರಸ್ತೆ, ಕುಷ್ಟಗಿ ರಸ್ತೆ ಬಸವೇಶ್ವರ ವೃತ್ತ, ಚಿಟಿಗೇರ ಓಣಿ ಜನತಾ ಬಜಾರ್ ಮೂಲಕ ಸಂಚರಿಸಿ ಜಾಗೃತಿ ಮೂಡಿಸಿದರು