ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಬಿಜೆಪಿ ಅಭ್ಯರ್ಥಿ ಭರ್ಜರಿ ಪ್ರಚಾರ

Mainashree
Updated On : 11 Apr 2014, 11:57 am

ಮಸ್ಕಿ: ನರೇಂದ್ರ ಮೋದಿ ಪ್ರಧಾನಿಯಾದರೆ ಮಾತ್ರ ದೇಶದ ಸಮಗ್ರ ಪ್ರಗತಿಯಾಗಲು ಸಾಧ್ಯವೆಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಹೇಳಿದರು.
ಅವರು ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಬುಧವಾರ ಚುನಾವಣಾ ಪ್ರಚಾರ ನಡೆಸಿ ತೋರಣದಿನ್ನಿ ಗ್ರಾಮದಲ್ಲಿ ಸಂಜೆ ಮತದಾರರನ್ನು ಉದ್ದೇಶಿಸಿ, ಕೇಂದ್ರದ ಯುಪಿಎ ಸರ್ಕಾರ ಅಧಿಕಾರ ವಹಿಸಿಕೊಂಡು 10 ವರ್ಷ ಆಡಳಿತ ನಡೆಸಿದ್ದರೂ ಅಭಿವೃದ್ಧಿ ಸಾಧಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಕೂಡಾ ಜನಪರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಗುಜರಾತ್ ರಾಜ್ಯದಲ್ಲಿ ನರೇಂದ್ರ ಮೋದಿ ಅಭಿವೃದ್ಧಿ ಮಾಡಿ ತೋರಿಸಿದ್ದಾರೆ. ಗುಜರಾತ್‌ನಲ್ಲಿ ಎಲ್ಲ ಗ್ರಾಮಗಳಿಗೂ ಕುಡಿಯುವ ನೀರಿನ ಯೋಜನೆ ಯಶಸ್ವಿಯಾಗಿ ಜಾರಿಗೆ ತರಲಾಗಿದೆ. ರೈತರಿಗೆ ನಿರಂತರ ವಿದ್ಯುತ್ ಒದಗಿಸಲಾಗುತ್ತಿದೆ ಎಂದು ಹೇಳಿದರು.
ಮತದಾರರು ತಮಗೆ ಬೆಂಬಲಿಸಿದಲ್ಲಿ ಅನುದಾನದ ಸಮರ್ಪಕ ಅಭಿವೃದ್ಧಿಗೆ ಬಳಕೆ ಮಾಡುವುದಾಗಿ ಭರವಸೆ ನೀಡಿದ ಅವರು, ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸನಗೌಡ ಬ್ಯಾಗವಾಟ್, ಜಿಪಂ ಸದಸ್ಯ ವಿಶ್ವನಾಥ ಪಾಟೀಲ್ ಮಾತನಾಡಿದರು. ಜಿಪಂ ಸದಸ್ಯ ಮಹದೇವಪ್ಪಗೌಡ, ಬಸವರಾಜಪ್ಪಗೌಡ ಹಾಲಾಪೂರು, ಅಮರಯ್ಯ ಸ್ವಾಮಿ, ತಿಮ್ಮನಗೌಡ ಗುಡದೂರು, ಹನುಮೆಶ ನಾಯಕ ಬಳಗಾನೂರು, ಸಂಗಮೇಶ ಹತ್ತಿಗುಡ್ಡ, ದೊಡ್ಡ ಈಶಪ್ಪಗೌಡ, ಶೇಖರಪ್ಪ ಇಟಗಿ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement