ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಶೀಘ್ರವೇ ಸಿಎಂಗೆ ಮನವಿ

Mainashree
Updated On : 20 Apr 2014, 11:20 am

ಲಿಂಗಸ್ಗೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಕಾಲಿಕ ಆಲಿಕಲ್ಲು ಮಳೆಯಿಂದ ಮನೆ, ಬೆಳೆ ಹಾನಿಗೀಡಾಗಿ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಸರ್ಕಾರ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದೆಂದು ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ತಿಳಿಸಿದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನ ದೇವರಭೂಪೂರ ಗ್ರಾಪಂ ವ್ಯಾಪ್ತಿಯಲ್ಲಿ ಕಳೆದ ಮಾ.7ರಂದು ಸುರಿದ ಅಕಾಲಿಕ ಆಲಿಕಲ್ಲು ಮಳೆಗೆ ಕೋಟ್ಯಂತರ ರುಪಾಯಿ ಮೌಲ್ಯದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಅನೇಕ ಮನೆಗಳ ಚಾವಣಿ ಕುಸಿದು ಜನತೆ ಬೀದಿ ಪಾಲಾಗಿದ್ದಾರೆ.
ಜೀವಹಾನಿ: ಪ್ರಸ್ತುತ ಏ.17ರಿಂದ ಸುರಿದ ಅಕಾಲಿಕ ಮಳೆ, ಬಿರುಗಾಳಿಗೆ ಪುನಾ ಅನೇಕ ರೈತರ ಬತ್ತ, ಮೆಣಸಿನಕಾಯಿ, ಹತ್ತಿ ಸೇರಿದಂತೆ ಇತರೆ ಬೆಳೆಗಳು ಹಾಳಾಗಿವೆ. ಮನೆಗಳ ಚಾವಣಿ ಗಾಳಿಗೆ ಹಾರಿ ಹೋಗಿವೆ. ಸಿಡಿಲು ಬಡಿದು ಒಬ್ಬ ವ್ಯಕ್ತಿ ಹಾಗೂ ಜಾನುವಾರುಗಳು ಮೃತಪಟ್ಟಿವೆ. ವಿದ್ಯುತ್ ಕಂಬಗಳು ನೆಲಕ್ಕುರುಳಿ ರೈತರ ಪಂಪ್ಸೆಟ್ಗಳು ಹಾಳಾಗಿವೆ.
ಅದೇ ರೀತಿ ದೇವದುರ್ಗ ತಾಲೂಕಿನಲ್ಲಿ ಸಿಡಿಲಿನಿಂದ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಅಲ್ಲದೆ ಕೋಟ್ಯಂತರ ರು. ಬೆಲೆಯ ಬತ್ತ ಹಾಗೂ ತೋಟಗಾರಿಕೆ ಬೆಳೆಗಳು ನಷ್ಟಕ್ಕೀಡಾಗಿವೆ. ಕೂಡಲೇ ಕೃಷಿ, ಕಂದಾಯ, ಜೆಸ್ಕಾಂ, ತೋಟಗಾರಿಕೆ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮಗ್ರ ಸಮೀಕ್ಷಾ ಕಾರ್ಯ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement