ವಿಶ್ವಭೂಮಿ ದಿನ ಇಂದು
ರಾಯಚೂರು: ಜಿಲ್ಲಾಡಳಿತ, ಜಿಪಂ, ಕ್ಯಾಸುಟೆಕ್, ಆರ್ಟಿಪಿಎಸ್ ಮತ್ತಿತರೆ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಏ.22ರಂದು ನಗರದಲ್ಲಿ ವಿಶ್ವಭೂಮಿ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 8.30ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಜಾಥಾಕ್ಕೆ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.