ಸಾಹಸ ಕ್ರೀಡೆ ತರಬೇತಿ ಶಿಬಿರಕ್ಕೆ ಅರ್ಜಿ
ರಾಯಚೂರು: ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯಿಂದ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ಬೆಳ್ಳಿ ಹಬ್ಬದ ಅಂಗವಾಗಿ ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಶಾಲಾ ಮಕ್ಕಳಿಗೆ ಬೇಸಿಗೆ ಸಾಹಸ ತರಬೇತಿ ಶಿಬಿರ ಮತ್ತು ವಿಶೇಷ ಸಾಹಸ ಕ್ರೀಡಾ ಶಿಬಿರ ಆಯೋಜಿಸಲಾಗಿದೆ. ಕ್ರೀಡೆಗಳಲ್ಲಿ ಭಾಗವಹಿಸುವರು 9ರಿಂದ 17 ವರ್ಷದೊಳಗಿನವರಾಗಿರಬೇಕು. ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿನ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳ ಕಚೇರಿಯಲ್ಲಿ ಏ.28ರೊಳಗೆ ಸಲ್ಲಿಸಬೇಕು. ಅರ್ಹರ ಅರ್ಜಿಗಳನ್ನು ತರಬೇತಿ ಶಿಬಿರಕ್ಕೆ ಶಿಫಾರಸು ಮಾಡಲಾಗುವುದು. ನಿಗದಿತ ಅರ್ಜಿ ನಮೂನೆ, ಶಿಬಿರದ ಶುಲ್ಕ ಇತ್ಯಾದಿ ವಿವರಗಳನ್ನು ಸಹಾಯಕ ನಿರ್ದೇಶಕರಲ್ಲಿ ಪಡೆಯಬಹುದಾಗಿದೆ ಎಂದು ಇಲಾಖೆ ತಿಳಿಸಿದೆ.