ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮೌಲ್ಯಮಾಪನ ಕೇಂದ್ರದಲ್ಲಿ ಚುನಾವಣೆ ಪ್ರಚಾರ

Rashmi Kasaragodu
Updated On : 23 Apr 2014, 12:08 pm

ರಾಯಚೂರು: ಮುಂಬರುವ ವಿಧಾನ ಪರಿಷತ್ತಿನ ಚುನಾವಣೆಗೆ ಈಗಿನಿಂದಲೇ ವಿವಿಧ ಪಕ್ಷಗಳ ಆಕಾಂಕ್ಷಿಗಳು ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ಗೊಂದಲಕ್ಕೆ ದಾರಿ ಮಾಡಿದೆ. ನಗರದಲ್ಲಿ ವಿವಿಧೆಡೆ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಕೇಂದ್ರಗಳಿಗೂ ತೆರಳಿ ಪ್ರಚಾರ ಕೈಗೊಳ್ಳುತ್ತಿರುವ ಅಂಶ ಬೆಳಕಿಗೆ ಬಂದಿದೆ.
ಈಚೆಗಷ್ಟೇ ಲೋಕಸಭೆ ಚುನಾವಣೆ ಮುಗಿದಿದ್ದರೂ ನೀತಿ ಸಂಹಿತೆಯಿನ್ನೂ ಜಾರಿಯಲ್ಲಿದೆ. ಆದರೆ ನೀತಿ ಸಂಹಿತೆಯನ್ನೂ ಲೆಕ್ಕಿಸದೇ ವಿಧಾನ ಪರಿಷತ್ ಚುನಾವಣೆಯಲ್ಲಿ ಈಶಾನ್ಯ ಮತಕ್ಷೇತ್ರದ ಅಭ್ಯರ್ಥಿಗಳಾಗುವ ನಿರೀಕ್ಷೆಯಲ್ಲಿರುವ ಬಿಜೆಪಿಯ ಶಶಿಲ್ ನಮೋಶಿ, ಮತ್ತೊಬ್ಬ ಆಕಾಂಕ್ಷಿ ಶಿವಬಸಪ್ಪ ಮಾಲಿಪಾಟೀಲ್ ಮಾಡಿರುವುದು ತಿಳಿದುಬಂದಿದೆ. ಮೌಲ್ಯಮಾಪನ ಕಾರ್ಯಕ್ಕೆ ಅಡಚಣೆಯಾಗದಂತೆ ಜಿಲ್ಲಾಡಳಿತ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿದೆ. ಹಾಗೆಯೇ ಮೌಲ್ಯಮಾಪನ ಮಾಡುವವರನ್ನು ಹೊರತುಪಡಿಸಿ ಬೇರೆಯವರಿಗೆ ಕೇಂದ್ರದೊಳಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಗುತ್ತಿದೆ. ಆದರೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಂಎಲ್ಸಿ ಚುನಾವಣೆಗೆ ಕಣಕ್ಕಿಳಿಯಲಿರುವವರಿಗೆ ಮಾತ್ರ ಮೌಲ್ಯಮಾಪನ ಕೇಂದ್ರದೊಳಕ್ಕೆ ಪ್ರವೇಶಿಸಲು ಅವಕಾಶ ನೀಡಿದ್ದಲ್ಲದೇ ಮೌಲ್ಯಮಾಪನದಲ್ಲಿ ತೊಡಗಿದ್ದ ಶಿಕ್ಷಕರ ಬಳಿ ಮತಯಾಚನಗೆ ಅವಕಾಶ ನೀಡಿದ್ದು ವಿವಾದಕ್ಕೆ ದಾರಿ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ಈ ಬಗ್ಗೆ ತಮಗೆ ದೂರುಗಳು ಬಂದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರಚಾರ ಮಾಡುವ ಮುನ್ನ ಅನುಮತಿ ಪಡೆಯುವುದು ಅವಶ್ಯ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement