ನಿಷೇಧಾಜ್ಞೆ
ರಾಯಚೂರು: ನಗರದಲ್ಲಿ ಮೇ 1 ಮತ್ತು 2ರಂದು ಸಿಇಟಿ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆ ಪರೀಕ್ಷೆ ದಿನದಂದು ಪರೀಕ್ಷೆ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗುತ್ತಿದೆ.
ಈ ಕುರಿತು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಆದೇಶ ಹೊರಡಿಸಿದ್ದು, ಸಿಇಟಿ ಪ್ರವೇಶ ಪರೀಕ್ಷೆಗಳು ಜರುಗುವ ಆರು ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಅಕ್ರಮಕ್ಕೆ ಅವಕಾಶ ನೀಡುವುದನ್ನು ತಡೆಯಲು ಸೂಚಿಸಿದ್ದಾರೆ.
ಈ ಆದೇಶವು ಮೇ 1 ಹಾಗೂ ಮೇ 2ರಂದು ಪರೀಕ್ಷೆಯ ಅವಧಿಯಲ್ಲಿ ಎಲ್ಲ ಆರು ಪರೀಕ್ಷಾ ಕೇಂದ್ರಗಳ ಸುತ್ತಲು ಜಾರಿಯಲ್ಲಿರುತ್ತದೆ. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿದ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳನ್ನು ಹೊರತುಪಡಿಸಿ ಉಳಿದವರು ನಿಷೇಧಿತ ಪ್ರದೇಶ ಪ್ರವೇಶಿಸುವಂತಿಲ್ಲ ಎಂದು ಎಚ್ಚರಿಸಿದ್ದಾರೆ. ಅಭ್ಯರ್ಥಿಗಳು ಮೊಬೈಲ್, ಪಠ್ಯ ಪುಸ್ತಕ, ಕ್ಯಾಲ್ಯುಕ್ಲೇಟರ್ ಪರೀಕ್ಷೆ ಕೇಂದ್ರದೊಳಗೆ ತರುವುದು ನಿಷೇಧಿಸಿದ್ದು, ಪರೀಕ್ಷಾ ಕೇಂದ್ರಗಳ ಹತ್ತಿರದ ಎಲ್ಲ ಜೆರಾಕ್ಸ್ ಅಂಗಡಿ ಹಾಗೂ ಸೈಬರ್ ಕಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಲು ಸಹ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.