ಕೆಬಿಜೆಎನ್ನೆಲ್ ಎಂಜಿನಿಯರ್ಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಯಾದಗಿರಿ: ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಇಲಾಖೆ ವತಿಯಿಂದ ನಡೆಯುವ ಕಾಲುವೆ ನಿರ್ಮಾಣ ಮೂಲ ನಕ್ಷೆ ಬಿಟ್ಟು, ಬೇಕಾಬಿಟ್ಟಿ ಕಾಲುವೆ ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರರು ಮತ್ತು ಇಂಜಿನಿಯರಗಳ ಮೇಲೆ ಸೂಕ್ತಕ್ರಮ ಜರುಗಿಸುವಂತೆ ಒತ್ತಾಯಿಸಿ ಜಿಲ್ಲಾ ಕರವೇ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ರೈತರಿಗೆ ಮುಂಚಿತವಾಗಿ ಯಾವುದೇ ನೋಟಿಸ್ ನೀಡದೇ, ಪರಿಹಾರದ ಚಕಾರ ಎತ್ತದೆ ಅತುರಾತರವಾಗಿ ಕಾಲುವೆ ನಿರ್ಮಾಣ ಮಾಡುತ್ತಿರುವುದು ರೈತರ ಮೇಲೆ ಬರೆ ಎಳೆದಂತಾಗಿದೆ. ಆದ್ದರಿಂದ ಕೂಡಲೇ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸೂಕ್ತ ಪರಿಹಾರ ಘೋಷಿಸಬೇಕು:ಕಾಲುವೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರ ಘೋಷಿಸಬೇಕು. ಮಣ್ಣು ಮಿಶ್ರಿತ ಕಳಪೆ ಮರಳನ್ನು ಕಾಮಗಾರಿಗೆ ಬಳಸುತ್ತಿರುವುದನ್ನು ತಡೆಹಿಡಿಯಬೇಕು ಎಂದಿದ್ದಾರೆ