ಶಾಸಕ ಪ್ರತಾಪಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ
ಸಿಂಧನೂರು: ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧ ಮಾಜಿ ಸಂಸದ, ಬಿಜೆಪಿ ಮುಖಂಡ ಕೆ. ವಿರುಪಾಕ್ಷಪ್ಪ ನಗರದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ರೀತಿಯಲ್ಲಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ದೂರು ದಾಖಲಿಸಿದ್ದಾಗಿ ವಿರುಪಾಕ್ಷಪ್ಪ ಅವರು ತಿಳಿಸಿದ್ದಾರೆ