ಹಾವು ಕಚ್ಚಿ ಮಹಿಳೆ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಮುಚ್ಚಳಕ್ಯಾಂಪಿನ ಹೊಲದಲ್ಲಿ ಹಾವು ಕಚ್ಚಿ ಮಹಿಳೆ ಸಾವಿಗೀಡಾಗಿದ್ದಾಳೆ. ಮೃತಳನ್ನು ಹುಸೇನ್ ಬೀ ಎಂದು ಗುರುತಿಸಲಾಗಿದೆ. ಈಕೆ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಆಕೆಯ ಕಾಲಿಗೆ ಕಡಿದಿದ್ದು, ಕೂಡಲೇ ಆಕೆಯನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದರೂ, ಚೇತರಿಸಿಕೊಳ್ಳದೇ ಸಾವಿಗೀಡಾಗಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಅಪಘಾತ: ಸವಾರನ ಸಾವು
ರಾಯಚೂರು: ಮಾನವಿ ತಾಲೂಕಿನ ನೀರಮಾನವಿ-ಸಿರವಾರ ರಸ್ತೆಯಲ್ಲಿ ಮೊಪೆಡ್ ಗೆ ಟ್ರಾಕ್ಟರ್ ಡಿಕ್ಕಿಯಾಗಿ ಮೊಪೆಡ್ ಸವಾರ ಸಾವಿಗೀಡಾಗಿದ್ದಾನೆ. ಮೃತನನ್ನು ವಿಶ್ವನಾಥ(46) ಎಂದು ಗುರ್ತಿಸಲಾಗಿದೆ. ಈತ ಮೊಪೆಡ್ ಮೇಲೆ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಟ್ರಾಕ್ಟರ್ ಡಿಕ್ಕಿ ಹೊಡೆದಿದ್ದರಿಂದ ಕೆಳಗೆ ಬಿದ್ದ ವಿಶ್ವನಾಥ್ ಮೇಲೆ ಟ್ರಾಕ್ಟರ್ ಸಾಗಿದ್ದು, ಗಾಯಗೊಂಡ ಆತನನ್ನು ಕೂಡಲೇ ಮಾನವಿ ಸರ್ಕಾರಿ ಅಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಮಾನವಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.