ಎನ್ನೆಸ್ಸೆಸ್ ಘಟಕ ಉದ್ಘಾಟನೆ
ರಾಯಚೂರು: ನಗರದ ಸೇಂಟ್ ಥಾಮಸ್ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾಲೇಜಿನ ನೂತನ ಎನ್ನೆಸ್ಸೆಸ್ ಘಟಕವನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ್ ರಾಯಚೂರಕರ್ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತಗೊಳ್ಳದೇ ರಾಷ್ಟ್ರೀಯ ಸೇವಾ ಯೋಜನೆಯನ್ನು ಪಾಲ್ಗೊಂಡು ಸೇವಾ ಮನೋಭಾವ ಬೆಳೆಸಿಕೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಕಾರ್ಯದರ್ಶಿ ಥಾಮಸ್ ಬೆಂಜಮಿನ್ ವಹಿಸಿದ್ದರು. ಅತಿಥಿಗಳಾಗಿ ಶ್ರೀನಿವಾಸ್, ಲಿಯಾಖತ್ ಬೇಗಂ ಪಾಲ್ಗೊಂಡಿದ್ದರು. ಕಾಲೇಜಿನ ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳಿದ್ದರು.