ರಾಯಚೂರು

ವನಮಹೋತ್ಸವಕ್ಕೆ ಚಾಲನೆ

ರಾಯಚೂರು: ಸ್ವಚ್ಛ, ಸುಂದರ ಹಾಗೂ ಅಚ್ಚ ಹಸಿರಿನ ಮಂತ್ರಾಲಯ ತಮ್ಮ ಕನಸಾಗಿದೆ. ಪರಿಸರ ಸಂರಕ್ಷಣೆಯಿಂದ ಮಾತ್ರ ಜೀವ ಸಂಕುಲದ ಉಳಿವು ಸಾಧ್ಯ. ಈ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಗೆ ಐದು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ಸಸಿ ನೆಡುವ ಕಾರ್ಯಕ್ರಮಕ್ಕೆ ಶ್ರೀಮಠ ಮುಂದಾಗಿದೆ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಹೇಳಿದರು.
ಮಂತ್ರಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಚಾಲನೆ ನೀಡಿ ಅನುಗ್ರಹ ಸಂದೇಶ ನೀಡಿ, ಅಭಿವೃದ್ಧಿ ಹೆಸರಿನಲ್ಲಿ ನಾವೆಲ್ಲರೂ ಪರಿಸರ ಹಾನಿಯ ಕಾರ್ಯ ಮಾಡಿದ್ದೇವೆ. ಇನ್ನು ಮುಂದಾದರೂ ಎಚ್ಚೆತ್ತುಕೊಳ್ಳುವುದು ಅವಶ್ಯ. ಪರಿಸರ ಸಂರಕ್ಷಣೆಯಿಂದ ಮಾತ್ರ ಮಾನವನ ಪ್ರಗತಿ ಸಾಧ್ಯ ಎಂದು ಹೇಳಿದರು.
'ಹರಿತ್ಸುಮಾರ್ಗ ಯೋಜನೆ': ಮಂತ್ರಾಲಯ ಶ್ರೀಮಠವು ಪರಿಸರ ಸಂರಕ್ಷಣೆ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲುದ್ದೇಶಿಸಿದೆ. ಅದರಂತೆ ಸದ್ಯ 5 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯ ಸಸಿಗಳನ್ನು ಮಂತ್ರಾಲಯ ಹಾಗೂ ಸುತ್ತಲಿನ ಪ್ರದೇಶದಲ್ಲಿ ನೆಡಲಾಗುತ್ತಿದೆ. ಮುಂದಿನ ದಿನಗಳಲ್ಲಿ 'ಹರಿತ್ಸುಮಾರ್ಗ ಯೋಜನೆ' ಅಡಿ ರಾಯಚೂರು-ಮಂತ್ರಾಲಯ ಮಧ್ಯೆ ರಸ್ತೆಯ ಇಕ್ಕೆಲಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವ ಬೃಹತ್ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪರಿಸರ ಸಂರಕ್ಷಣೆ ಎಲ್ಲರ ಆದ್ಯತೆಯಾಗಬೇಕು. ಆಗ ಮಾತ್ರ ಮಾನವ ಸೇರಿ ಜಗತ್ತಿನಲ್ಲಿರುವ ಎಲ್ಲ ಜೀವ ಸಂಕುಲ ಸುರಕ್ಷಿತವಾಗಿರಬಹುದು ಎಂದ ಅವರು, ಪರಿಸರ ಸಂರಕ್ಷಣೆ ಯಿಂದ ಕಾಲದಿಂದ ಕಾಲಕ್ಕೆ ಸಮರ್ಪಕ ಮಳೆ ಮತ್ತು ಆಹಾರೋತ್ಪಾದನೆಗೆ ದಾರಿಯಾಗಲಿದೆ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀಮಠದ ಪ್ರಮುಖರು ಹಾಗೂ ಸಿಬ್ಬಂದಿಯಿದ್ದರು. ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು ವನಮಹೋತ್ಸವದಲ್ಲಿ ಪಾಲ್ಗೊಂಡು ಶ್ರೀಮಠದಿಂದ ನಿಗದಿಪಡಿಸಿದ ಪ್ರದೇಶದಲ್ಲಿ ಸಸಿ ನೆಟ್ಟರು. ಮಂತ್ರಾಲಯ ಗ್ರಾಮಸ್ಥರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಅ.16ರ CJPಯ ಪ್ರತಿಭಟನೆಗೆ ತಡೆ ನೀಡಲು ಹೈಕೋರ್ಟ್ ನಕಾರ!

ಕಾಕ್ರೋಚ್ ಜನತಾ ಪಾರ್ಟಿ, ಕಾಂಗ್ರೆಸ್ ಎರಡೂ ಒಂದೇ; ಇಲ್ಲಿ ನಿಮ್ಮನ್ನು ಯಾರೂ ಬಂಧಿಸಲ್ಲ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ!

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

Indian Stock Market: ಕೊನೆಗೂ ಪುಟಿದಿದ್ದ ಭಾರತೀಯ ಷೇರು ಮಾರುಕಟ್ಟೆ, ಸೆನ್ಸೆಕ್ಸ್ ದಾಖಲೆಯ ಏರಿಕೆ