ರಾಯಚೂರು

ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ರಾಯಚೂರು: ಲಿಂಗಸ್ಗೂರು ತಾಲೂಕಿನ ನಾಗರಬೆಂಚಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಘಟನೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ನಗರದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಕಾರ್ಯಕರ್ತರು ಧರಣಿ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತ ಎಂ.ಪಿ. ಮಾರುತಿ ಮೂಲಕ ಸಿಎಂಗೆ ದೂರು ಸಲ್ಲಿಸಿ, ಲಿಂಗಸ್ಗೂರು ತಾಲೂಕಿನ ನಾಗರಬೆಂಚಿ ಗ್ರಾಮದಲ್ಲಿ ಕಿಡಿಗೇಡಿಗಳು ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ್ದು, ಕೂಡಲೇ ಅವರನ್ನು ಬಂಧಿಸುವಂತೆ ಆಗ್ರಹಿಸಿದರು.
ಎರಡೂ ಪ್ರಕರಣ ತನಿಖೆ ಸಿಒಡಿಗೆ ಒಪ್ಪಿಸಿ: ಜಿಪಂ ಅಧಿಕಾರಿಗಳ ಮೇಲೆ ಜಿಪಂ ಅಧ್ಯಕ್ಷೆ ಹಾಗೂ ಸದಸ್ಯರ ಪತಿಯಂದಿರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಎರಡೂ ಪ್ರಕರಣಗಳ ತನಿಖೆಯ ಸಿಒಡಿಗೆ ಒಪ್ಪಿಸುವಂತೆ ಒತ್ತಾಯಿಸಿದ ಹೋರಾಟಗಾರರು, ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಸೂಕ್ತ ಕಾನೂನು ರಚಿಸುವಂತೆ ಆಗ್ರಹಿಸಿದರು.
ಸಮಾಜದಲ್ಲಿ ನಿರ್ಭೀತಿ ಬದುಕನ್ನು ಸಾಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಿಯಮಾನುಸಾರ ಕೈಗೆತ್ತಿಕೊಳ್ಳದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಪರ್ಯಾಯ ವಸತಿ ಸೌಲಭ್ಯ ಕಲ್ಪಿಸಿ: ಲಿಂಗಸ್ಗೂರು-ಸಿಂಧನೂರು ರಾಜ್ಯ ಹೆದ್ದಾರಿ ದುರಸ್ತಿ ಕಾಮಗಾರಿ ಜಾರಿಯಲ್ಲಿದ್ದು, ಈ ರಸ್ತೆ ಅಭಿವೃದ್ಧಿ ಹಿನ್ನೆಲೆ ವಸತಿ ಹೀನರಾದವರಿಗೆ ಪರ್ಯಾಯ ವಸತಿ ಸೌಲಭ್ಯ ಕಲ್ಪಿಸಬೇಕು. ಪರಿಹಾರ ದೊರಕಿಸಿಕೊಡುವಂತೆ ಹೋರಾಟಗಾರರು ಒತ್ತಾಯಿಸಿದರು.
ಅಕ್ರಮ-ಸಕ್ರಮ ಸಮಿತಿ ರಚಿಸಬೇಕು. ಭೂನ್ಯಾಯ ಮಂಡಳಿ ಸಮಿತಿ ರಚಿಸಬೇಕು. ಜಿಲ್ಲೆ ವ್ಯಾಪ್ತಿಗೆ ಬರುವ ನಗರಸಭೆ, ಪುರಸಭೆ ಹಾಗೂ ಪ.ಪಂ.ಗಳಲ್ಲಿ ನಿವೇಶನ ರಚಿಸಿರುವ ಬಡಾವಣೆಗಳಲ್ಲಿ ಸಾರ್ವಜನಿಕ ಉದ್ಯಾನವನ, ಶಾಲೆ, ದೇವಸ್ಥಾನಕ್ಕೆ ಕಾಯ್ದಿರಿಸಿದ ಸ್ಥಳ ಕಬಳಿಸಿ ಸರ್ಕಾರಕ್ಕೆ ವಂಚಿಸುತ್ತಿರುವವರನ್ನು ಗುರುತಿಸಿ ಶಿಕ್ಷೆಗೊಳಪಡಿಸುವಂತೆ ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್