ರಾಯಚೂರು

ರಾಂಪೂರ ಕಾಲುವೆಗೆ ನೀರು ಹರಿಸಲು ಬಯ್ಯಾಪುರ ಆಗ್ರಹ

ಲಿಂಗಸ್ಗೂರು: ತಾಲೂಕಿನ ರಾಂಪೂರ ಏತ ನೀರಾವರಿ ಕಾಲುವೆಗೆ ನೀರು ಹರಿಸುವ ಮೂಲಕ ರೈತರ ಬಿತ್ತನೆ ಕಾರ್ಯಕ್ಕೆ ಅನುಕೂಲ ಕಲ್ಪಿಸಬೇಕೆಂದು ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ಒತ್ತಾಯಿಸಿದರು.
ರಾಂಪೂರ ಏತ ನೀರಾವರಿ ಸ್ಥಾವರಕ್ಕೆ ಬುಧವಾರ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಸಾಗರ ಜಲಾಶಯದಲ್ಲಿ ಸಾಕಷ್ಟು ನೀರು ಸಂಗ್ರಹಗೊಂಡಿದ್ದು, ರಾಂಪೂರ ಏತ ನೀರಾವರಿ ಸ್ಥಾವರದ ಮೋಟಾರ್ ಪಂಪ್ ಅಳವಡಿಕೆ ಹಾಗೂ ಇತರೆ ಕೆಲಸ ಶೀಘ್ರ ಪೂರ್ಣಗೊಳಿಸಿ ಈಗಿರುವ ಹಳೆ ಪೈಪ್‌ಲೈನ್ ಮುಖಾಂತರವೇ ಕಾಲುವೆಗೆ ನೀರು ಹರಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು. ನೀರು ಹರಿಸಲು ವಿಳಂಬ ಮಾಡಿದರೆ ಕೃಷಿ ಚಟುವಟಿಕೆ ಕೂಡ ವಿಳಂಬಗೊಳ್ಳಲಿದೆ. ಇದರಿಂದ ರೈತರು ರೊಚ್ಚಿಗೇಳುವ ಸಾಧ್ಯತೆಯಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿದರು.
ಜಲಾಶಯದ ರಸ್ತೆ ಬದಿ ನಿರ್ಮಿಸಿದ ಕಾಂಪೌಂಡ್ ಕಾಮಗಾರಿ ಸಂಪೂರ್ಣ ಕಳಪೆಯಿಂದ ಕೂಡಿದ್ದು, ನಿಯಮಾನುಸಾರ ಸಿಮೆಂಟ್, ಉಸುಕು ಹಾಕದೆ ಹಾಗೂ ಸರಿಯಾಗಿ ಕ್ಯೂರಿಂಗ್ ಮಾಡದ ಪರಿಣಾಮ ಕಂಪೌಂಡ್ ಗೋಡೆ ಕಳಪೆ ಗುಣಮಟ್ಟದಿಂದ ಕೂಡಿದೆ. ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಕಾರ್ಯನಿರ್ವಾಹಕ ಅಭಿಯಂತರ ಮೃತ್ಯುಂಜಯರಿಗೆ ಸೂಚಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಪಾಟೀಲ್, ಜಿಪಂ ಮಾಜಿ ಅಧ್ಯಕ್ಷ ಹನುಮಂತಪ್ಪ ತೊಗರಿ, ಎಂ.ಡಿ. ರಫೀ, ಚೆನ್ನಾರೆಡ್ಡಿ ಬಿರಾದಾರ ಸೇರಿದಂತೆ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT