ನಾಳೆ ಗಬ್ಬೂರು ಜಾತ್ರೆ
ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಫೆ.11ರಂದು ಶ್ರೀಬೂದಿಬಸವೇಶ್ವರ ಸಂಸ್ಥಾನ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಫೆ.10ರಂದು ಮಹಾದಾಸೋಹ, ಕಡುಬಿನ ಕಾಳಗ ನಡೆಯಲಿದ್ದು, ಫೆ.11ರಂದು ಸಂಜೆ 5.30ಕ್ಕೆ ಮಹಾರಥೋತ್ಸವ ನಡೆಯಲಿದೆ.
ಜಾತ್ರಾ ಮಹೋತ್ಸವದ ಸಾನ್ನಿಧ್ಯವನ್ನು ಕೇದಾರಪೀಠದ ಶ್ರೀಭೀಮಾಶಂಕರಲಿಂಗ ಶಿವಾಚಾರ್ಯರು ವಹಿಸಲಿದ್ದು, ಶ್ರೀ ಬೂದಿಬಸವೇಶ್ವರ ಶಿವಾಚಾರ್ಯರು ಅಧ್ಯಕ್ಷತೆ ವಹಿಸುವರು. ಫೆ.12ರಂದು ಧಾರ್ಮಿಕ ಸಭೆ ನಡೆಯಲಿದ್ದು, ನಂತರ ಹಾಸ್ಯಸಂಜೆ ಆಯೋಜಿಸಲಾಗಿದೆ. ಶ್ರೀಬೂದಿಬಸವೇಶ್ವರರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಶ್ರೀಮಠ ಕೋರಿದೆ.