ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕನ್ನಡ ಭವನ ನಿರ್ಮಾಣಕ್ಕೆ ಜೈಕರವೇ ಆಗ್ರಹ

Rashmi Kasaragodu
Updated On : 11 Feb 2014, 2:30 am

ಗುಲ್ಬರ್ಗ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ ಮಾಡಬೇಕೆಂದು ಜೈ ಕನ್ನಡಿಗರ ರಕ್ಷಣಾ ವೇದಿಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗೆ ಆಗ್ರಹಿಸಿದೆ.
ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಕನ್ನಡಭವನ ಮಂಜೂರಿಯಾಗಿದ್ದರೂ ಕಟ್ಟಡದ ಕಾಮಗಾರಿಯಾಗಿಲ್ಲ. ಕೆಲಮೊಂದು ತಾಲೂಕುಗಳಲ್ಲಿ ಕಟ್ಟಡದ ಕಾಮಗಾರಿ ಅರ್ಧದಲ್ಲೇ ನಿಲ್ಲಿಸಲಾಗಿದೆ. ಕೆಲಮೊಂದು ತಾಲೂಕಿನಲ್ಲಿ ಕನ್ನಡಭವನ ಕಟ್ಟಡಕ್ಕೆ ನಿವೇಶನ ಮಂಜೂರಿಯಾಗಿದ್ದರೂ ಕಟ್ಟಡ ಕಾಮಗಾರಿ ಚಾಲನೆ ನೀಡಿಲ್ಲ. ಅರ್ಧಕ್ಕೆ ನಿಂತಿರುವ ಕಟ್ಟಡ ಕಾಮಗಾರಿಯನ್ನು ಅತೀ ಶೀಘ್ರದಲ್ಲಿ ಮುಗಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಹಾಗೂ ಗುತ್ತಿಗೆದಾರರನ್ನು ಅತೀ ಶೀಘ್ರದಲ್ಲಿ ಮುಗಿಸಿಕೊಡುವಂತೆ ಆದೇಶಿಸಬೇಕು.
ಬಿಜೆಪಿ ಸರ್ಕಾರವಿದ್ದಾಗ ರಾಜ್ಯಾದ್ಯಂತ ಹೊಸ ತಾಲೂಕುಗಳನ್ನು ಘೋಷಣೆ ಮಾಡಲಾಗಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ತಾಲೂಕುಗಳು ಜಾರಿಯಲ್ಲಿ ಬಂದಿರುವುದಿಲ್ಲ. ಆದ್ದರಿಂದ ಅತೀ ಶೀಘ್ರದಲ್ಲಿ ಘೋಷಣೆ ಮಾಡಲಾದ ತಾಲೂಕುಗಳನ್ನು ಜಾರಿಯಲ್ಲಿ ಬಂದಿರುವುದಿಲ್ಲ.
ಆದ್ದರಿಂದ ಅತೀ ಶೀಘ್ರದಲ್ಲೇ ಘೋಷಣೆ ಮಾಡಲಾದ ತಾಲೂಕುಗಳನ್ನು ಜಾರಿಯಲ್ಲಿ ಬರುವಂತೆ ಮಾಡಬೇಕೆಂದು ಜಿಲ್ಲಾಧಿಕಾರಿ ಮುಖಾಂತರ ಸಿಎಂಗೆ ಸಲ್ಲಿಸಿದ ಮನವಿ ಪತ್ರದಲ್ಲಿ ಜೈ ಕನ್ನಡ ರಕ್ಷಣಾ ವೇದಿಕೆ ಸಂಸ್ಥಾಪಕ ಸಚಿನ್ ಎಸ್. ಪರತಾಬಾದ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement