ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನಾಳೆ ಪ್ರತಿಭಾ ಪುರಸ್ಕಾರ

Rashmi Kasaragodu
Updated On : 11 Feb 2014, 2:29 am

ರಾಯಚೂರು: ಮಾದಿಗ ಸಮಾಜಕ್ಕೆ ಸೇರಿದ ಎಸ್ಸೆಸ್ಸೆಲ್ಸಿ ಯಿಂದ ಸ್ನಾತಕೋತ್ತರ ಪದವಿವರೆಗೆ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪ್ರತಿಭಾವಂತರಿಗೆ ಫೆ.12 ರಂದು ನಗರದಲ್ಲಿ ನವರತ್ನ ಯುವಕ ಸಂಘದಿಂದ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ.
ನಗರದ ಹರಿಜನವಾಡದ ಸಮುದಾಯ ಭವನದಲ್ಲಿ ಫೆ.12ರಂದು ಸಂಜೆ 6ಕ್ಕೆ ನಡೆಯುವ ಸಮಾರಂಭವನ್ನು ಶಾಸಕ ಡಾ. ಶಿವರಾಜ್ ಪಾಟೀಲ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಎಪಿಎಂಸಿ ಮಾಜಿ ಅಧ್ಯಕ್ಷ ಆರ್. ತಿಮ್ಮಯ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಪಂ ಮಾಜಿ ಸದಸ್ಯ ಬಷಿರುದ್ದೀನ್, ನಗರಸಭೆ ಮಾಜಿ ಅಧ್ಯಕ್ಷೆ ಮಮತಾ ಸುಧಾಕರ್, ನಗರಸಭೆ ಸಭೆ ಸದಸ್ಯ ಪವನ್ ಕುಮಾರ್ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್, ರೈತಸಂಘದ ರಾಜ್ಯಾಧ್ಯಕ್ಷ ಆರ್. ಮಾನಸಯ್ಯ, ಹೈ.ಕ. ವಿಮೋಚನಾ ಕೇಂದ್ರದ ಸಂಯೋಜಕ ಅಂಬಣ್ಣ ಅರೋಲಿಕರ್ ಆಗಮಿಸಲಿದ್ದಾರೆ. ಸಮಾರಂಭದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ನವರತ್ನ ಯುವಕ ಸಂಘದ ಅಧ್ಯಕ್ಷ ಎಸ್. ಹುಲಿಗೆಪ್ಪ, ವೆಂಕಟೇಶ್ ಮನವಿ ಮಾಡಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement