ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

'ಸಾಮರ್ಥ್ಯ ಅರಿತು ಬೋಧಿಸಿ'

Rashmi Kasaragodu
Updated On : 11 Feb 2014, 2:29 am

ಸಿಂಧನೂರು: ಮಕ್ಕಳು ಮಣ್ಣಿನ ಮುದ್ದೆ ಇದ್ದಂತೆ. ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಶಿಕ್ಷಕರು ಕಲಿಸಬೇಕು ಎಂದು ಖ್ಯಾತ ಶಿಕ್ಷಣ ತಜ್ಞ ಗುರುರಾಜ ಕರ್ಜಗಿಯವರ ಸೃಜನಶೀಲ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಸುನಿತಾ ಫಡ್ನಿಸ್ ಹೇಳಿದರು.
ಅನ್ನದಾನೇಶ್ವರ ಕಲ್ಯಾಣ ಮಂಟಪದಲ್ಲಿ ಸಹನಾ ಮಾಂಟೆಸ್ಸರಿ ಶಾಲೆಯ ಚಿಣ್ಣರ ಅಂಗಳ 2014 ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಕರು ಮತ್ತು ಪಾಲಕರು ಮಕ್ಕಳ ಭವಿಷ್ಯವನ್ನು ನಿರ್ಮಾಣ ಮಾಡುವ ಜವಾಬ್ದಾರಿ ಹೊತ್ತವರು. ಮಕ್ಕಳ ಸುಂದರ ಬದುಕನ್ನು ಅನಾವರಣಗೊಳಿಸುವ ಸಂಭ್ರಮಾಚರಣೆಯೇ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಶಾಲೆಯ ಮಕ್ಕಳಿಂದ ಆಯೋಜಿಸಿದ್ದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕಗಳು ಜನಮನ ಸೂರೆಗೊಂಡವು. ಕಾರ್ಯಕ್ರಮದಲ್ಲಿ ವರ್ಷದ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಯನ್ನು ನೀಡಲಾಯಿತು. ಶಾಲೆಯ ಆಡಳಿತಾಧಿಕಾರಿ ಕೆ.ಜ್ಯೋತಿ ಸ್ವಾಗತಿಸಿದರು. ಸಿಇಒ ರಾಜಕುಮಾರ ವಾರ್ಷಿಕ ವರದಿ ಮಂಡಿಸಿದರು. ಮಾರ್ಗರೇಟ್ ನಿರೂಪಿಸದರು. ಕನಕದುರ್ಗ ವಂದಿಸಿದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement