ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

'ಹತ್ಯಾ'ಚಾರ ತನಿಖೆ ಚುರುಕಿಗೆ ಕರವೇ ಆಗ್ರಹ

Rashmi Kasaragodu
Updated On : 11 Feb 2014, 2:29 am

ರಾಯಚೂರು: ಸಿಂಧನೂರಿನ ಮಹಿಬೂಬ್ ಕಾಲನಿಯ ಶ್ರೀದೇವಿ ಎಂಬ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಳಿಸುವಂತೆ ಕರವೇ ಒತ್ತಾಯಿಸಿದೆ.
ಈ ಕುರಿತು ಸೋಮವಾರ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿ, ಮಹಾರಾಷ್ಟ್ರದ ಪಂಢರಪುರದಲ್ಲಿ ಸಿಂಧನೂರಿನ ವಿದ್ಯಾರ್ಥಿನಿ ಶ್ರೀದೇವಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿಯೇ ಪ್ರಕರಣ ದಾಖಲಾಗಿದ್ದರೂ ಆರೋಪಿ ತುಕಾರಾಮ ಕಾಂಬಳೆಯನ್ನು ಬಂಧಿಸಲು ಅಲ್ಲಿನ ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆಂದು ಟೀಕಿಸಿದರು.
ಈ ನಿಟ್ಟಿನಲ್ಲಿ ಗೃಹ ಸಚಿವರು ಮಧ್ಯಪ್ರವೇಶಿಸಿ ನೆರೆಯ ರಾಜ್ಯದ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ತನಿಖೆಯನ್ನು ಚುರುಕುಗೊಳಿಸಲು ಆಗ್ರಹಿಸಿದ ಸಂಘಟನೆಯು ತನಿಖೆಯನ್ನು ಸಿಒಡಿಗೆ ಒಪ್ಪಿಸಬೇಕು. ತಪ್ಪಿದಲ್ಲಿ ಸಂಘಟನೆಯು ಉಗ್ರ ಹೋರಾಟಕ್ಕೆ ಮುಂದಾಗಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಅಶೋಕಕುಮಾರ್ ಜೈನ್, ಖಲೀಲ್ ಪಾಷಾ, ಮಾನಸಿಂಗ್ ಠಾಕೂರ್, ರಘುವೀರನಾಯಕ, ನಾಗರಾಜ ಬಿಚ್ಚಾಲಿ ಸೇರಿದಂತೆ ಅನೇಕರು ಎಚ್ಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement