ಕೃಷಿ ಎಂಜಿನಿಯರ್ಸ್ ಸಮಾವೇಶ ನಾಳೆ
ರಾಯಚೂರು: ಕರ್ನಾಟಕ ರಾಜ್ಯ ಕೃಷಿ ಎಂಜಿನಿಯರ್ಸ್ ಸಮಾವೇಶವನ್ನು ನಗರದ ರಾಯಚೂರು ಕೃಷಿ ವಿವಿಯಲ್ಲಿ ಫೆ.15ರಿಂದ ಆಯೋಜಿಸಲಾಗಿದೆ. ಕೃಷಿ ವಿವಿ ಪ್ರೇಕ್ಷಾಗೃಹದಲ್ಲಿ ಫೆ.15ರಂದು ಬೆಳಗ್ಗೆ 10ಕ್ಕೆ ಕೃಷಿ ಸಚಿವ ಕೃಷ್ಣ ಭೈರೇಗೌಡ ಸಮಾವೇಶ ಉದ್ಘಾಟಿಸಲಿದ್ದಾರೆ. ಭಾರತೀಯ ಕೃಷಿ ಎಂಜಿನಿಯರ್ಸ್ ಸಂಘದ ಅಧ್ಯಕ್ಷ ಡಾ. ವಿ.ಎಂ. ಮಹಾನಂದಿ, ಉಪ ಕುಲಪತಿ ಡಾ. ಬಿ.ವಿ. ಪಾಟೀಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕ ಡಾ. ಶಿವರಾಜ್ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರೋಪ ಸಮಾರಂಭವು ಫೆ.16ರಂದು ನಡೆಯಲಿದ್ದು, ರಾಜ್ಯ ಕಿಸಾನ್ ಮಿಷನ್ ಅಧ್ಯಕ್ಷ ಡಾ. ಎಸ್.ಎ. ಪಾಟೀಲ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಬಿಹಾರದ ರಾಜೇಂದ್ರ ಕೃಷಿ ವಿವಿಯ ನಿವೃತ್ತ ಕುಲಪತಿ ಡಾ. ಎನ್.ಎಲ್. ಮಯೂರ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ರಾಯಚೂರು ಕೃಷಿ ವಿವಿ ಕುಲಪತಿ ಡಾ. ಬಿ.ವಿ. ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಶುಲ್ಕ ಮರುಪಾವತಿ
ರಾಯಚೂರು: ರಾಷ್ಟ್ರಿಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಕುರಿತು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಫೆ.15ರೊಳಗೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.