ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

'ಪೊಲಿಯೋ ಅಭಿಯಾನ ಯಶಸ್ಸಿಗೆ ಶ್ರಮಿಸಿ'

Mainashree
Updated On : 18 Feb 2014, 11:56 am

ರಾಯಚೂರು: ನಗರ ಸೇರಿದಂತೆ ಜಿಲ್ಲಾದ್ಯಂತ ಫೆ.23 ಮತ್ತು 26ರಂದು ನಡೆಯಲಿರುವ ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಶ್ರಮಿಸುವಂತೆ ಜಿಪಂ ಸಿಇಒ ವಿಜಯ ಜೋತ್ಸ್ನಾ ಸೂಚಿಸಿದರು.
ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಕರೆದಿದ್ದ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮದ ಕಾರ್ಯಪಡೆ ಸಮಿತಿಯ ಸಭೆಯಲ್ಲಿ ಮಾತನಾಡಿ, ಐದುವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ನೀಡಿಕೆಗೆ ಗಮನ ಹರಿಸುವಂತೆ ಆದೇಶಿಸಿದರು.
ಈ ವೇಳೆ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾರಾಯಣಪ್ಪ, ಜಿಲ್ಲೆಯಲ್ಲಿ ಐದು ವರ್ಷದೊಳಗಿನ 2.93 ಲಕ್ಷ ಮಕ್ಕಳಿದ್ದಾರೆ. ನಗರ ಪ್ರದೇಶದಲ್ಲಿ 73,310 ಹಾಗೂ ಗ್ರಾಮೀಣ ಪ್ರದೇಶದಲ್ಲಿ 2,19,782 ಮಕ್ಕಳಿಗೆ ಲಸಿಕೆ ನೀಡಲು ಯೋಜಿಸಲಾಗಿದೆ ಎಂದು ವಿವರಿಸಿದರು.
ಜಿಲ್ಲಾದ್ಯಂತ ವಿವಿಧೆಡೆ ಒಟ್ಟು 1115 ಲಸಿಕಾ ಕೇಂದ್ರ ತೆರೆಯಲಾಗುತ್ತದೆ. 31 ಸಂಚಾರಿ ತಂಡಗಳು, ಲಸಿಕೆ ವಿತರಿಸಲು 2406 ಸಿಬ್ಬಂದಿ, 245 ಮೇಲ್ವಿಚಾರಕಿಯರನ್ನು ನಿಯೋಜಿಸಲಾಗುತ್ತಿದೆ ಎಂದು ಸಭೆಗೆ ವಿವರಿಸಿದರು.
ಸಭೆಯಲ್ಲಿ ನೋಡಲ್ ಅಧಿಕಾರಿ ಡಾ. ವಿಜಯಾ, ಡಾ. ಪವಾಡೆಪ್ಪ, ಡಾ.ಸುರೇಂದ್ರಬಾಬು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಸಿಬ್ಬಂದಿಯಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement