ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ರಸಪ್ರಶ್ನೆಯಿಂದ ವೈಜ್ಞಾನಿಕ ಮನೋಭಾವ ಹೆಚ್ಚಳ: ಡಿಡಿಪಿಐ

Vishwanath S
Updated On : 22 Feb 2014, 11:15 am

ರಾಯಚೂರು: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ಹಾಷ್ಮಿಯಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ನಗರದ ಹಾಷ್ಮಿಯಾ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ ಪ್ರಶ್ನೆಪತ್ರಿಕೆ ಬಿಡುಗಡೆ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಡಿಡಿಪಿಐ ರಾಮಾಂಜನೇಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವುದರ ಜೊತೆಗೆ ವಿದ್ಯಾರ್ಥಿಗಳು ವಿಜ್ಞಾನದಲ್ಲಿ ಆಸಕ್ತಿಯಿಂದ ಭಾಗವಹಿಸಲು ರಸಪ್ರಶ್ನೆ ಕಾರ್ಯಕ್ರಮ ನೆರವಾಗುತ್ತವೆ ಎಂದರು. ಕಾರ್ಯಕ್ರಮದಲ್ಲಿ ವಿಜ್ಞಾನ ವಿಷಯ ಪರಿವೀಕ್ಷಕ ಅಮರೇಶ್ವರ, ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಬಸವರಾಜ ಜೋಗಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಕುಂಟೆಪ್ಪ ಗೌರೀಪುರ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಯ್ದ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಹಾಗೂ ವಿಜ್ಞಾನ ಶಿಕ್ಷಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement