ಆರ್ಟಿಪಿಎಸ್ 1ನೇ ಘಟಕ ಸ್ಥಗಿತ
ರಾಯಚೂರು: ಶಕ್ತಿನಗರದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಒಂದನೇ ಘಟಕ ತಾಂತ್ರಿಕ ದೋಷದಿಂದ ಸೋಮವಾರ ಬೆಳಗ್ಗೆ ಸ್ಥಗಿತಗೊಂಡಿದೆ. ವಿದ್ಯುತ್ ಕೇಂದ್ರದ ಒಂದನೇ ಘಟಕದ ಬಾಯ್ಲರ್ ಟ್ಯೂಬ್ನಲ್ಲಿ ಕಂಡುಬಂದ ದೋಷದಿಂದಾಗಿ ಕೆಪಿಸಿ ಅಧಿಕಾರಿಗಳು ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ವಿದ್ಯುತ್ ಕೇಂದ್ರದ ಇನ್ನುಳಿದ 7 ಘಟಕಗಳಿಂದ ಒಟ್ಟು 31 ಮಿಲಿಯನ್ ಯೂನಿಟ್ ವಿದ್ಯುತ್ ರಾಜ್ಯ ಜಾಲಕ್ಕೆ ಸೋಮವಾರ ಬೆಳಗ್ಗೆವರೆಗೆ ರವಾನೆಯಾಗಿದೆ ಎಂದು ಆರ್ಟಿಪಿಎಸ್ ಮೂಲಗಳು ತಿಳಿಸಿವೆ.