ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಆಡಳಿತದಲ್ಲಿ ಮೂಗು ತೂರಿಸಬೇಡಿ: ಜಯಣ್ಣ

Lingaraj Badiger
Updated On : 1 Mar 2014, 11:17 am

ರಾಯಚೂರು: ನಗರಸಭೆಯ ಸದಸ್ಯರು ನಗರದ ಸಮಗ್ರ ಅಭಿವೃದ್ಧಿಯ ಚಿಂತನೆ ಹೊಂದಿರುವುದು ಅವಶ್ಯಕ. ವಿಭಿನ್ನ  ರಾಜಕೀಯ ಪಕ್ಷಗಳಿಂದ ಆಯ್ಕೆಯಾಗಿ ಬಂದಿದ್ದರೂ ಪಕ್ಷಾತೀತವಾಗಿ ಅಭಿವೃದ್ಧಿಗೆ ಶ್ರಮಿಸುವ ಗುಣ ಹೊಂದಬೇಕು. ಅಭಿವೃದ್ಧಿ ವಿಚಾರದಲ್ಲಿ ಪಕ್ಷಗಳ ನಾಯಕರ ಹಸ್ತಕ್ಷೇಪಕ್ಕೆ ಅವಕಾಶ ನೀಡದಂತೆ ನಗರಸಭೆ ಹಿರಿಯ ಸದಸ್ಯ ಜಯಣ್ಣ ಮನವಿ ಮಾಡಿದರು.
ಅವರು ನಗರದಲ್ಲಿ ಶುಕ್ರವಾರ ನಗರಸಭೆ ಬಜೆಟ್ ಸಭೆಯಲ್ಲಿ ಮಾತನಾಡಿ, ನಗರಸಭೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು. ಪ್ರತಿಯೆಂದು ವಿಚಾರದಲ್ಲಿ ಆಯಾ ರಾಜಕೀಯ ಪಕ್ಷಗಳ ಸದಸ್ಯರು ವರಿಷ್ಠರ ಮಾತು ಕೇಳುವುದು ಒಳ್ಳೆಯ ಬೆಳವಣಿಗೆಯಲ್ಲ. ನಗರದ ಪ್ರಗತಿಗೆ ಸಂಬಂಧಿಸಿ ಸದಸ್ಯರು ತಮ್ಮದೇ ಆದ ದೂರದೃಷ್ಟಿಯಿರಿಸಿಕೊಳ್ಳುವುದು ಅವಶ್ಯಕ ಎಂದರು.
ತಮ್ಮ ಕಾಂಗ್ರೆಸ್ ಪಕ್ಷವೂ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ನಗರಸಭೆಯ ಆಡಳಿತದಲ್ಲಿ ಮೂಗು ತೂರಿಸುವುದು ತಮಗೆ ಸರಿ ಎನಿಸುವುದಿಲ್ಲ. ನಗರದ ಹಿತದೃಷ್ಟಿಯಿಂದ ಇದು ಒಳ್ಳೆಯದೂ ಅಲ್ಲ. ಸದಸ್ಯರು ರಾಜಕೀಯ ಹೊರತಾದ ಹಾಗೂ ನಗರದ ಜನತೆಗೆ ಒಳಿತು ಮಾಡುವ ಉದ್ದೇಶದಿಂದ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಸಲಹೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement