ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನಾಳೆ ವಿಜ್ಞಾನ, ತಂತ್ರಜ್ಞಾನ ಸಮ್ಮೇಳನ

Lingaraj Badiger
Updated On : 3 Jan 2014, 11:47 am

ರಾಯಚೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವಿಭಾಗೀಯ ಸಮ್ಮೇಳನ ಜ.4ರಂದು ನಗರದಲ್ಲಿ ಆಯೋಜಿಸಲಾಗಿದೆ. ನಗರದ ಕೃಷಿ ವಿವಿ ಪ್ರೇಕ್ಷಾಗೃಹದಲ್ಲಿ ಬೆಳಗ್ಗೆ 10ಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧ್ಯಕ್ಷ ಎಸ್.ಎನ್. ನಾಗರಾಜು ಹಾಗೂ ಕೃಷಿ ವಿವಿ ಕುಲಪತಿ ಡಾ. ಬಿ.ವಿ. ಪಾಟೀಲ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವಿಶೇಷ ನಿರ್ದೇಶಕ ಡಾ. ಎಚ್. ಹೊನ್ನೇಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಡಾ. ಪಿ.ಎಸ್. ಶಂಕರ ಪ್ರಧಾನ ಭಾಷಣ ಮಾಡಲಿದ್ದಾರೆ. ಅಧ್ಯಕ್ಷತೆ ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ವಹಿಸಲಿದ್ದು, ಜಿಲ್ಲೆಯ ಸಂಸದರು, ಶಾಸಕರು, ಜೈನ್ ವಿವಿ ನಿರ್ದೇಶಕ ಪ್ರೊ. ಜಯಗೋಪಾಲ ಹಾಗೂ ನಗರಸಭೆ ಅಧ್ಯಕ್ಷ ಮಹಾದೇವಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement