ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಅಧಿಕಾರಿಗಳ ವಿರುದ್ಧ ದೂರು

Lingaraj Badiger
Updated On : 6 Jan 2014, 11:07 am

ಲಿಂಗಸ್ಗೂರು: ತಾಲೂಕಿನ ಮುದಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಗೂ ತಹಸೀಲ್ದಾರರ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮುಖಂಡರು ಸಚಿವ ಡಾ. ಶರಣಪ್ರಕಾಶ ಪಾಟೀಲರಿಗೆ ಮನವಿ ಸಲ್ಲಿಸಿದರು.
ಮುದಗಲ್ ಪಟ್ಟಣ ಪಂಚಾಯಿತಿ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ಮುಖ್ಯಾಧಿಕಾರಿ ವಿಜಯಲಕ್ಷ್ಮೀ ಹಾಗೂ ತಹಸೀಲ್ದಾರ್ ಜಿ.ಎಸ್.ಮಹಾಜನ್‌ರ ಭಷ್ಟಾಚಾರದಿಂದ ಆದಾಯ ಕಡಿಮೆ ಮಾಡಿಕೊಂಡ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ದೂರು ಆಧರಿಸಿ ಸಹಾಯಕ ಆಯುಕ್ತ ಟಿ.ಯೋಗೇಶ್ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ನೀಡಿದರೂ ಇದುವರೆಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದೆ ಭ್ರಷ್ಟ ಅಧಿಕಾರಿಗಳ ರಕ್ಷಣೆ ಮಾಡಿರುವುದು ಆಡಳಿತ ವೈಫಲ್ಯತೆ ಸಾಬೀತು ಪಡಿಸಿದೆ.
ಕೂಡಲೇ ಟೆಂಡರ್ ಪ್ರಕ್ರಿಯೆ ರದ್ದುಪಡಿಸಿ ಪುನಃ ಟೆಂಡರ್ ಕರೆಯಬೇಕು. ಸಮಿತಿ ಮಾಡಿದ ಆರೋಪ ಹಾಗೂ ಎಸಿ ಅವರು ಸಲ್ಲಿಸಿದ ವರದಿ ಆಧರಿಸಿ ತಹಸೀಲ್ದಾರ್ ಮತ್ತು ಮುಖ್ಯಾಧಿಕಾರಿಗಳನ್ನು ಅಮಾನತುಗೊಳಿಸಬೇಕೆಂದು ಮನವಿಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಪ್ರಭುಲಿಂಗ ಮೇಗಳಮನಿ, ಮುಖಂಡರಾದ ಮಾನಪ್ಪ ಪೂಜಾರಿ, ಯಂಕಪ್ಪ ಚಿತ್ತಾಪೂರ, ಕೆಂಚಪ್ಪ ಆನಾಹೊಸೂರು, ಚನ್ನಬಸವ ಕುಣೆಕೆಲ್ಲೂರ, ಸೋಮಣ್ಣ ಬಚ್ಯಾಳ, ನಾಗರಾಜ ಹಾಲಬಾವಿ ಸೇರಿದಂತೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement