ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಸ್ಸೆನ್ನೆಲ್ ಕಾರ್ಮಿಕರ ಧರಣಿ

Mainashree
Updated On : 9 Jan 2014, 11:04 am

ಕ.ಪ್ರ. ವಾರ್ತೆ  ರಾಯಚೂರು  ಜ.8
ಕಾರ್ಮಿಕರಿಗೆ ಕನಿಷ್ಠ ವೇತನ ನೀಡಿಕೆ, ವಜಾಗೊಂಡ ಕಾರ್ಮಿಕರ ಪುನಾ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಬುಧವಾರ ಬಿಎಸ್ಸೆನ್ನೆಲ್ ಕ್ಯಾಶುವಲ್ ಮತ್ತು ಗುತ್ತಿಗೆ ಕಾರ್ಮಿಕರ ಯೂನಿಯನ್‌ನಿಂದ ಧರಣಿ ನಡೆಸಲಾಯಿತು.
ನಗರದ ಬಿಎಸ್ಸೆನ್ನೆಲ್ ಕಚೇರಿಯ ಎದುರು ಧರಣಿ ನಡೆಸಿದ ಸಂಘದ ಕಾರ್ಯಕರ್ತರು, 2000ನೇ ಇಸ್ವಿಯಿಂದ 2004ರವರೆಗೆ ಸುಮಾರು 49,92,939 ಬಾಕಿಯಿರುವ ಭವಿಷ್ಯ ನಿಧಿ ತಕ್ಷಣವೇ ಪಾವತಿಸಬೇಕು. ತಿಂಗಳ ವೇತನ ಮತ್ತು ತುಟ್ಟಿ ಭತ್ಯೆ ಪಾವತಿಸಬೇಕು ಎಂದು ಒತ್ತಾಯಿಸಿದರು.
ಕಾನೂನುಬಾಹಿರವಾಗಿ ಕಾರ್ಮಿಕರನ್ನು ವಜಾಗೊಳಿಸಿರುವ ಆದೇಶ ಹಿಂಪಡೆಯಬೇಕು. ವರ್ಗಾವಣೆಗೊಂಡಿರುವ ಕಾರ್ಮಿಕರನ್ನು ಮರಳಿ ಕರೆಯಿಸಬೇಕು. ಗುತ್ತಿಗೆ ಕಾರ್ಮಿಕ ಕಾಯಿದೆ ಪ್ರಕಾರ ಕಾರ್ಮಿಕರಿಗೆ ವೇತನ ಚೀಟಿ, ಇಎಸ್‌ಐ ಪತ್ರ ಹಾಗೂ ಗುರುತಿನ ಚೀಟಿ ನೀಡಬೇಕೆಂದು ಆಗ್ರಹಿಸಿದರು.
ಕಾರ್ಮಿಕ ಸಂಘಟನೆಗೆ ವಿರೋಧಿಸಿದ ಕಾರ್ಮಿಕ ಕಾನೂನು ಜಾರಿ ಮಾಡದ ಡಿಜಿಎಂ ಬಸವರಾಜ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಪ್ರಕರಣ ದಾಖಲಿಸಬೇಕು. ಪ್ರತಿ ತಿಂಗಳು 7ನೇ ತಾರೀಕಿನೊಳಗೆ ಕಾರ್ಮಿಕರಿಗೆ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು. ದಿನವೂ 8 ಗಂಟೆಗಳಿಗಿಂತ ಹೆಚ್ಚಿನ ಸಮಯ ಕಾರ್ಮಿಕರನ್ನು ದುಡಿಸಿಕೊಳ್ಳಬಾರದು. ಎಲ್ಲ ಗುತ್ತಿಗೆ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು. ಕಾರ್ಮಿಕರೊಂದಿಗೆ ಅಸಭ್ಯವಾಗಿ ವರ್ತಿಸುವ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೋರಾಟ ಗಾರರು ಆಗ್ರಹಿಸಿದರು. ಸಂಘಟನೆಯ ಪ್ರಮುಖರಾದ ಶೇಕ್ಷಾಖಾದ್ರಿ, ವಿಠ್ಠಲ್, ಧುರೇಂದ್ರ, ಗುತ್ತಿಗೆ ಕಾರ್ಮಿಕ ಸಂಘದ ರಾಜ್ಯಾಧ್ಯಕ್ಷ ಸಿ.ಕೆ. ಗುಂಡಣ್ಣ, ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಸೇರಿ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement