ರೈತ ಸಂಘದ ಪ್ರತಿಭಟನೆ ತಾತ್ಕಾಲಿಕ ಮುಂದೂಡಿಕೆ
ಲಿಂಗಸ್ಗೂರು: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕಾಂಗ್ರೆಸ್ ಹಿರಿಯ ಮುಖಂಡ ಎನ್.ಎಸ್. ಬೋಸರಾಜು ಅವರ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಸ್ಪಷ್ಟಪಡಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಳೆದ 30 ವರ್ಷಗಳಿಂದ ರೈತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಹೋರಾಟ ನಡೆಸುತ್ತಾ ಬಂದಿದೆ. ಕಳೆದ ಡಿ.25ರಂದು ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರಿಗೆ ಜಿಲ್ಲೆಯ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯಿಸಲಾಯಿತು.
ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು: ಈ ಹೇಳಿಕೆ ಖಂಡಿಸಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲರು ಪತ್ರಿಕಾಗೋಷ್ಠಿ ನಡೆಸಿ ಜ.9ರಂದು ಬೋಸರಾಜು ವಿರುದ್ಧ ವ್ಯಾಪಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇದರಿಂದ ಜ.7ರಂದು ಬೋಸರಾಜು ಅವರ ಪುತ್ರ ಹಾಗೂ ಅವರ ಬೆಂಬಲಿಗರು ಖುದ್ದಾಗಿ ಸಂಪರ್ಕಿಸಿ ನಮ್ಮ ತಂದೆಯವರು ರೈತ ವಿರೋಧಿ ಕೆಲಸ ಮಾಡಿಲ್ಲ. ರೈತರ ಪರ ಹೋರಾಟ ಮಾಡುತ್ತಾ ಬಂದಿದ್ದಾರೆ. ಈ ಸಮಸ್ಯೆ ಮುಂದುವರಿಸಬೇಡಿ ಎಂದು ವಿನಂತಿಸಿಕೊಂಡರು.