ಏಗನೂರು; ವೆಂಕಟೇಶ್ವರನ ದರ್ಶನ ಪಡೆದ ಭಕ್ತರು
ರಾಯಚೂರು: ವೈಕುಂಠ ಏಕಾದಶಿ ನಿಮಿತ್ತ ನಗರದ ಏಗನೂರು ಟೆಂಪಲ್ನಲ್ಲಿ ಶನಿವಾರ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ನಗರದ ಭಕ್ತರು ಬೆಳಗ್ಗೆಯಿಂದಲೇ ಏಗನೂರು ಟೆಂಪಲ್ನಲ್ಲಿ ಸಪ್ತಗಿರಿವಾಸ ಅಲಂಕಾರದಲ್ಲಿದ್ದ ವೆಂಕಟೇಶ್ವರ ದೇವರ ದರ್ಶನವನ್ನು ಜನತೆ ಪಡೆದರು. ಈ ಹಿನ್ನೆಲೆಯಲ್ಲಿ ಟೆಂಪಲ್ನಲ್ಲಿ ವೆಂಕಟೇಶ್ವರನಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ನೆರವೇರಿಸಲಾಯಿತು. ವೈಕುಂಠ ಏಕಾದಶಿ ಅಂಗವಾಗಿ ಸಪ್ತಗಿರಿಯಂತೆ ಬೃಹದಾಕಾರದ ಕಲಾಕೃತಿ ನಿರ್ಮಿಸಿ ಅದರ ಮೇಲ್ಭಾಗದಲ್ಲಿ ವೆಂಕಟೇಶ್ವರ ದೇವರ ಉತ್ಸವ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ದರ್ಶನಕ್ಕೆ ಆಗಮಿಸಿದ್ದ ಭಕ್ತರಿಗೆ ತೀರ್ಥ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.