ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕುಡಿವ ನೀರಿನ ಯೋಜನೆ; ತಾರತಮ್ಯದ ಆರೋಪ

Rashmi Kasaragodu
Updated On : 12 Jan 2014, 1:16 am

ಸಿಂಧನೂರು: ಬಳಗಾನೂರು ಜಿ.ಪಂ. ವ್ಯಾಪ್ತಿಯ ಮುಳ್ಳೂರು ಗ್ರಾಮದಲ್ಲಿ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಕೈಗೊಳ್ಳುವಲ್ಲಿ ಶಾಸಕ ಹಂಪನಗೌಡ ಬಾದರ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆಂದು ಎಂದು ಬಳಗಾನೂರು ಜಿಪಂ ಸದಸ್ಯೆ ಶಾಂತಮ್ಮ ದಯಾನಂದರಡ್ಡಿ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಪಂನಿಂದ ನಿರ್ಮಿಸಲಾಗುವ ಕಾಮಗಾರಿ ಬಗ್ಗೆ ತಮಗೆ ಮಾಹಿತಿ ನೀಡಿಲ್ಲ. ಶಾಸಕರು ತಮ್ಮ ಬೆಂಬಲಿಗರನ್ನು ಕಳಿಸಿ ಕಾಮಗಾರಿಗೆ ಚಾಲನೆ ನೀಡುವಂತೆ ಮಾಡಿದ್ದಾರೆಂದು ಆರೋಪಿಸಿದ ಅವರು, ಇದು ಶಾಸಕರ ತಾರತಮ್ಯ ನೀತಿಯನ್ನು ಸ್ಪಷ್ಪಪಡಿಸಿದೆ ಎಂದಿದ್ದಾರೆ. ಮುಂದಿನ ದಿನಗಳಲ್ಲಾದರೂ ಶಾಸಕರು ತಮ್ಮ ವ್ಯಾಪ್ತಿಯ ಕಾರ್ಯಕ್ರಮಗಳಿಗೆ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಕಾರ್ಯಕ್ರಮಕ್ಕೆ ಆಹ್ವಾನಿಸುವುದನ್ನು ಮರೆಯದಂತೆ ಹಾಗೂ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ತೋರಿದಲ್ಲಿ ಜಿಪಂ ಸಿಇಒ ಹಾಗೂ ಜಿಲ್ಲಾಧಿಕಾರಿಗೆ ದೂರುವುದಾಗಿ ಎಚ್ಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement