ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕ್ರೀಡೆಯಿಂದ ಆರೋಗ್ಯ ಜೀವನ: ಡಿಸಿ

Rashmi Kasaragodu
Updated On : 12 Jan 2014, 1:18 am

ರಾಯಚೂರು: ಸರ್ಕಾರಿ ನೌಕರರು ದೈಹಿಕ ಶ್ರಮದ ಮೂಲಕ ಉತ್ತಮ ಆರೋಗ್ಯ ಹೊಂದುವ ನಿಟ್ಟಿನಲ್ಲಿ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದು ಅವಶ್ಯಕ ಎಂದು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಕರೆ ನೀಡಿದರು. ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ಕಾರಿ ನೌಕರರು ದೈಹಿಕವಾಗಿ ಚಟುವಟಿಕೆಯಿಂದಿರುವುದನ್ನೇ ಮರೆತಿದ್ದಾರೆ. ಈ ಹಿನ್ನೆಲೆಯಲ್ಲಿ ನೌಕರರು ದೈಹಿಕ ಆರೋಗ್ಯ ಸುಧಾರಣೆಗೆ ಹಾಗೂ ಆರೋಗ್ಯವಂತ ಬದುಕು ರೂಪಿಸಿಕೊಳ್ಳುವ ಕಾರ್ಯಕ್ಕೆ ಮುಂದಾಗಬೇಕಿದೆ ಎಂದು ಹೇಳಿದರು.
ಆರೋಗ್ಯವಂತ ಬದುಕಿಗೆ ವ್ಯಾಯಾಮ, ಕ್ರೀಡೆ ಮತ್ತು ಕನಿಷ್ಟ ದೈಹಿಕ ಪರಿಶ್ರಮಕ್ಕೆ ತೊಡಗಿಸುವುದು ಅವಶ್ಯಕ. ಈ ನಿಟ್ಟಿನಲ್ಲಿ ಆಗಾಗ್ಗೆ ಆಯೋಜಿಸುವ ಕ್ರೀಡೆಗಳಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಿದ ಅವರು, ರಾಜ್ಯಮಟ್ಟದಲ್ಲಿಯೂ ಜಿಲ್ಲೆಗೆ ಹೆಸರು ತರುವಂಥ ಕಾರ್ಯ ಮಾಡಲು ಕರೆ ನೀಡಿದರು.
ಸಮಾರಂಭದಲ್ಲಿ ಹೆಚ್ಚುವರಿ ಡಿಸಿ ಎಂ. ತಿಮ್ಮಪ್ಪ, ನಗರಸಭೆ ಅಧ್ಯಕ್ಷೆ ಮಹಾದೇವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಕ್ರೀಡಾಳುಗಳಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement