ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಲಿಂಗಸ್ಗೂರು: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಟ್ಟಣದ ಲಿಟ್ಲ್ ಫ್ಲವರ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಲಿಟ್ಲ್ ಫ್ಲವರ್ ಶಾಲೆಯ ಪ್ರಮೋದ ಕಥೆ ಹೇಳುವುದು, ಅನುಷಾ ಕವಡಿಮಟ್ಟಿ ಲಘು ಸಂಗೀತ, ಅಮೃತಾ ಅಭಿನಯ ಗೀತೆ, ವೆಂಕಟೇಶ ಜೋಷಿ ಧಾರ್ಮಿಕ ಪಠಣ, ಮನೋಷ ಗದ್ದಿ ಎಂಬ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯಗುರು ಸಿಸ್ಟರ್ ಡೋರಿನ್ ಜಕ್ಸ್, ಜಂಟಿ ಕಾರ್ಯದರ್ಶಿ ಸಿಸ್ಟರ್ ಜೂಲಿಯಸ್ ಸೇರಿ, ತರಬೇತಿ ಶಿಕ್ಷಕ ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.